More

    ಕಡಿಮೆ ದರದಲ್ಲಿ ಗುಣಮಟ್ಟದ ಅಕ್ಕಿ

    ಸಾಗರ: ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಅವರಿಗೆ ಗುಣಮಟ್ಟದ ಅಕ್ಕಿ ಕಡಿಮೆ ದರದಲ್ಲಿ ಒದಗಿಸಬೇಕು ಎನ್ನುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ್ ಅಕ್ಕಿ ಯೋಜನೆ ಜಾರಿಗೆ ತಂದಿದ್ದಾರೆ. ಜನತೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಕರೆನೀಡಿದರು.
    ಗುರುವಾರ ಸಾಗರ ನಗರಸಭೆ ಆವರಣದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ್ ಅಕ್ಕಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಪ್ರತಿಯೊಬ್ಬರಿಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಡಿಮೆ ದರದಲ್ಲಿ ಆಹಾರ ಪದಾರ್ಥವನ್ನು ವಿತರಿಸುತ್ತಿದೆ. ಈ ಪೈಕಿ 290ರೂ.ಗೆ 10 ಕೆ.ಜಿ. ಭಾರತ್ ಅಕ್ಕಿಯೂ ಒಂದು. ಅಕ್ಕಿ ಪಡೆಯಲು ಯಾವುದೇ ದಾಖಲಾತಿ ನೀಡುವ ಅಗತ್ಯವಿಲ್ಲ. ಒಂದು ೆನ್ ನಂ. ನೀಡಿದರೆ 10 ಕೆ.ಜಿ. ಅಕ್ಕಿ ಕೊಡಲಾಗುತ್ತದೆ. ಮುಂದಿನ ದಿನಗಳಲ್ಲಿ ನಗರದ ಎಲ್ಲ ವಾರ್ಡ್‌ಗಳಲ್ಲೂ ಅಕ್ಕಿ ವಿತರಿಸಲಾಗುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
    ನಗರಸಭೆ ಮಾಜಿ ಅಧ್ಯಕ್ಷೆ ಮಧುರಾ ಶಿವಾನಂದ್ ಮಾತನಾಡಿ, ಮೋದಿಯವರ ದೂರದೃಷ್ಟಿ ಆಡಳಿತದ ಲವೇ ಕಡಿಮೆ ದರದಲ್ಲಿ ಗುಣಮಟ್ಟದ ಅಕ್ಕಿ ವಿತರಣೆಯಾಗಿದೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಬೇಕು ಎನ್ನುವ ಕೇಂದ್ರದ ಯೋಜನೆ ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

    ಬಿಜೆಪಿ ನಗರ ಮಂಡಲ ಅಧ್ಯಕ್ಷ ಗಣೇಶಪ್ರಸಾದ್, ಪ್ರಮುಖರಾದ ವಿ.ಮಹೇಶ್, ಲಿಂಗರಾಜ್, ಮೈತ್ರಿ ಪಾಟೀಲ್, ಪ್ರೇಮ ಕಿರಣ್ ಸಿಂಗ್, ಸತೀಶ್ ಕೆ., ಕೃಷ್ಣ ಆರ್. ಶೇಟ್, ಎಂ.ಆರ್.ಮಹೇಶ್, ಯಶೋದಮ್ಮ, ವೀರರಾಜ ಜೈನ್, ಪರಶುರಾಮ್, ರಾಜೇಂದ್ರ ಪೈ, ಸಂತೋಷ್ ರಾಯಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts