More

    ಜಿಲ್ಲೆಗೆ ಬರುವವರಿಗೆ ಕ್ವಾರಂಟೈನ್ ಕಡ್ಡಾಯ

    ಮದ್ದೂರು: ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಚೆಕ್‌ಪೋಸ್ಟ್‌ಗಳಿಂದ ಕಣ್ತಪ್ಪಿಸಿ ಬರುವವರು ಯಾರೇ ಆದರೂ ಅವರನ್ನು ಗುರುತಿಸಿ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
    ಬೆಂಗಳೂರಿನಿಂದ ಮೈಸೂರಿಗೆ ಹೋಗುವ ಮಾರ್ಗ ಮಧ್ಯೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪೇಟೆ, ಪಾಂಡವಪುರ, ಮಳವಳ್ಳಿಯಲ್ಲಿ ಕರೊನಾ ಪ್ರಕರಣ ಹಾಗೂ ಚೆಕ್‌ಪೋಸ್ಟ್‌ಗಳನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    ಕರೊನಾ ಸೇನಾನಿಗಳ ಮೇಲೆ ಹಲ್ಲೆ ಮಾಡುವವರಿಗೆ 3 ವರ್ಷ ಕಠಿಣ ಶಿಕ್ಷೆಗೆ ವಿಧಿಸಲಾಗುವುದು. ಕ್ವಾರಂಟೈನ್ ಬಳಿ ಕೆಲಸ ಮಾಡುವ ಪೊಲೀಸರಿಗೆ ಪಿಪಿ ಕಿಟ್ ನೀಡುವ ಜೊತೆಗೆ ಒಂದು ವಾರದೊಳಗೆ ಕಡ್ಡಾಯವಾಗಿ ಕರೊನಾ ಪರೀಕ್ಷೆ ನಡೆಸಲಾಗುವುದು ಎಂದರು.
    ಕೈದಿಗಳಿಂದ ಪೊಲೀಸರಿಗೆ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ 7 ವರ್ಷ ಒಳಗಡೆ ಶಿಕ್ಷೆ ಇರುವ ಕೈದಿಗಳಿಗೆ ಜಾಮೀನು ಕೊಡಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಭಾನುವಾರ ಪೂರ್ಣ ಲಾಕ್‌ಡೌನ್ ಇರಲಿದೆ ಎಂದ ಅವರು ಇಡೀ ಜಗತ್ತಿನಲ್ಲಿ ಕರೊನಾ ಇದೆ ಎಂಬುದನ್ನು ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‌ಗೌಡ ಅರ್ಥ ಮಾಡಿಕೊಳ್ಳಬೇಕು. ಸರ್ಕಾರದ ವಿರುದ್ಧ ಅನಗತ್ಯವಾಗಿ ಆರೋಪ ಹೊರಿಸುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಡಿವೈಎಸ್ಪಿ ಪೃಥ್ವಿ, ಸಿಪಿಐ ಕೆ.ಆರ್.ಪ್ರಸಾದ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts