ತಂದೆ-ಮಗಳ ನಡುವೆ ಗಲಾಟೆ; ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಪ್ರಾಣ ತೆಗದಳು

home
ಸಾಂದರ್ಭಿಕ ಚಿತ್ರ
Published on

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಿಂದ ಸಿಟ್ಟಿಗೆದ್ದ ಮಗಳು ಗುದ್ದಲಿಯಿಂದ ತಂದೆ ತಲೆಗೆ ಹೊಡೆದು ಮಗಳು ಕೊಲೆ ಮಾಡಿದ್ದಾಳೆ.

ಹುಚ್ಚೀರಯ್ಯ(68) ಮಗಳಿಂದಲೇ ಕೊಲೆಯಾದ ತಂದೆ. ಪುಷ್ಪ (30) ಹತ್ಯೆ ಮಾಡಿದ ಮಗಳು. ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಮೊನ್ನೆ ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪುಷ್ಪ ಗಂಡನನ್ನು ಬಿಟ್ಟು ಬಂದು ಹಲವು ವರ್ಷಗಳಿಂದ ತಂದೆ ಮನೆಯಲ್ಲೇ ವಾಸವಿದ್ದಳು. ಈಕೆ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಮಂಗಳವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಪ್ಪ ಮಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ತಂದೆ ಮೇಲೆ ಕೋಪಗೊಂಡ ಪುಷ್ಪ ಗುದ್ದಲಿಯಿಂದ ತಂದೆಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ತೀವ್ರ ರಕ್ತಸ್ರಾವದಿಂದ ತಂದೆ ಸ್ಥಳದಲ್ಲೇ ಸಾವನ್ನಪಿದ್ದಾನೆ. ಘಟನೆಯಿಂದ ಆತಂಕಗೊಂಡ ಪುಷ್ಪಾ ಸ್ಥಳದಿಂದ ಎಸ್ಕೇಪ್ ಆಗಿದ್ದಾಳೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net