More

    ಆದಿವಾಸಿ ಬುಡಕಟ್ಟು ಸಮುದಾಯದ ಸಮಸ್ಯೆಗೆ ಶೀಘ್ರ ಪರಿಹಾರ; ಖಂಡ್ರೆ 

    ಬೆಂಗಳೂರು: ಅದಿವಾಸಿ ಬುಡಕಟ್ಟು ಸಮುದಾಯದ ಜನರ ಸಮಸ್ಯೆಗಳನ್ನು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.

    ವಿಕಾಸಸೌಧದಲ್ಲಿ ಅರಣ್ಯವಾಸಿಗಳಾದ ಸೋಲಿಗ ಮತ್ತಿತರೆ ಆದಿವಾಸಿ ಬುಡಕಟ್ಟು ಸಮುದಾಯದವರ ದೀರ್ಘಕಾಲೀನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದರು.
    ಆದಿ ವಾಸಿಗಳಿಂದಲೇ ಅರಣ್ಯ ಸಾವಿರಾರು ವರ್ಷಗಳಿಂದ ಉಳಿದಿದೆ. ಅವರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ತುರ್ತು ಹಕ್ಕುಪತ್ರ ನೀಡಲು ಸೂಚನೆ

    ಕೊಡಗು, ಚಾಮರಾಜನಗರ, ರಾಮನಗರ, ಮೈಸೂರು ಜಿಲ್ಲೆಯಲ್ಲಿನ ಆದಿವಾಸಿಗಳಿಗೆ ಹಕ್ಕುಪತ್ರ ನೀಡುವ ನಿಟ್ಟಿನಲ್ಲಿ ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಯೊಂದಿಗೆ ಸಮಾಲೋಚಿಸಿ ತುರ್ತು ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಿದರು.

    ಕಿರು ಅರಣ್ಯ ಉತ್ಪನ್ನ ಸಂಗ್ರಹಕ್ಕೆ ಅವಕಾಶ

    ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಕಿರು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಅವಕಾಶ ನೀಡಬೇಕು. ಹುಲಿ ಸಂರಕ್ಷಿತ ಪ್ರದೇಶದ ಹೊರತಾಗಿ ಇತರೆ ಕಾಡುಗಳಲ್ಲಿ ಆದಿವಾಸಿಗಳಿಗೆ ದನಕರು ಮೇಯಿಸಲು ಅವಕಾಶವಿದ್ದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಆಗುವುದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರೂಪು-ರೇಷೆ ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

    ಬೆಂಕಿ ನಂದಿಸಲು ಸಚಿವರ ಮನವಿ

    ಈ ಬಾರಿ ಮಳೆಯ ಕೊರತೆಯೂ ಇದ್ದು, ಬೇಸಿಗೆಯಲ್ಲಿ ಕಾಡ್ಗಿಚ್ಚಿನ ಅಪಾಯ ಹೆಚ್ಚು ಇರುವ ಹಿನ್ನೆಲೆಯಲ್ಲಿ ಅರಣ್ಯದಲ್ಲೇ ಇರುವ ಆದಿವಾಸಿಗಳು ಅರಣ್ಯ ರಕ್ಷಿಸಲು, ಬೆಂಕಿ ನಂದಿಸಲು ಶ್ರಮಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದರು. ಆದಿವಾಸಿಗಳ ನಿಯೋಗದ ನೇತೃತ್ವವನ್ನು ಗಿರೀಶ್ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts