ಶಿವಮೊಗ್ಗ: ಯುವ ಮನಸ್ಸುಗಳ ಕ್ರಿಯಾಶೀಲತೆಗೆ ಸ್ವಾತಂತ್ರೃ ಹೋರಾಟಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ ಸ್ಪೂರ್ತಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರಡ್ಡಿ ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಮತ್ತು ಶಿಕ್ಷಣ ಇಲಾಖೆಯಿಂದ ಸೋಮವಾರ ಸ್ವಾತಂತ್ರೊೃೀತ್ಸವದ ಅಂಗವಾಗಿ ಏರ್ಪಡಿಸಿದ್ದ ಸ್ವಾತಂತ್ರೃ ಹೋರಾಟಕ್ಕೆ ಕರ್ನಾಟಕದ ಕೊಡುಗೆ ವಿಷಯದ ಕುರಿತ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಸಮುದಾಯಕ್ಕೆ ಜ್ಞಾನವನ್ನು ಪಸರಿಸುವ ಕೆಲಸವನ್ನು ನಮ್ಮ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿದೆ. ಸ್ವಾತಂತ್ರೃ ಹೋರಾಟಕ್ಕೆ ನಮ್ಮ ನಾಡಿನ ಕೊಡುಗೆ ಬಹಳಷ್ಟಿದೆ. ಹೋರಾಟಗಾರರ ತ್ಯಾಗ, ಬಲಿದಾನ ಅರಿಯುವ ಸಲುವಾಗಿ ರಸಪ್ರಶ್ನೆ ಆಯೋಜಿಸಿರುವುದು ಅರ್ಥಪೂರ್ಣ ಎಂದರು.
ಡಿವಿಎಸ್ ಅಧ್ಯಕ್ಷ ಕೊಳಲೆ ರುದ್ರಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ಕೋಶಾಧ್ಯಕ್ಷ ಎಂ.ನವೀನ್ ಕುಮಾರ್, ಶಿವಮೊಗ್ಗ ತಾಲೂಕು ಅಧ್ಯಕ್ಷೆ ಮಹಾದೇವಿ, ಶಿಕಾರಿಪುರ ತಾಲೂಕು ಅಧ್ಯಕ್ಷ ಎಚ್.ಎಸ್.ರಘು ಮುಂತಾದವರಿದ್ದರು.