More

  ಹೊಸ ವರ್ಷ ಆರಂಭದಲ್ಲೇ ದುರ್ಘಟನೆ: ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 12 ಭಕ್ತರು ಬಲಿ

  ಶ್ರೀನಗರ: ಹೊಸ ವರ್ಷದ ಆರಂಭದಲ್ಲೇ ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಕಾಲ್ತುಳಿತಕ್ಕೆ 12 ಮಂದಿ ಮೃತಪಟ್ಟಿದ್ದು, ಡಜನ್​ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

  ಹೊಸ ವರ್ಷ ಹಿನ್ನೆಲೆಯಲ್ಲಿ ಮಾತಾ ವೈಷ್ಣೋ ದೇವಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ವೇಳೆ ಸಂಭವಿಸಿದ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಲುಕಿ 12 ಭಕ್ತರು ಅಸುನೀಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

  ತ್ರಿಕೂಟ ಬೆಟ್ಟದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಹಿರಿಯ ಅಧಿಕಾರಿಗಳು ಮತ್ತು ದೇವಸ್ಥಾನ ಮಂಡಳಿಯ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

  ಸದ್ಯದ ಮಾಹಿತಿಯ ಪ್ರಕಾರ 12 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಖಚಿತಪಡಿಸಿದ್ದಾರೆ ಮತ್ತು 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  ಮೃತರ ಕುಟುಂಬಗಳಿಗೆ ಪ್ರಧಾನಿ ಸಾಂತ್ವಾನ
  ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಗೂ ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. (ಏಜೆನ್ಸೀಸ್​)

  ತಮ್ಮ ಮಗುವಿಗೆ ಪುನೀತ್ ರಾಜಕುಮಾರ್ ಅಂತ ಹೆಸರಿಟ್ಟು ಅಭಿಮಾನ ಮೆರೆದ ದಂಪತಿ

  ವಿಜಯವಾಣಿ ಸಿನಿಮಾ ವಿಮರ್ಶೆ: ಹೆಣಗಾಟದಲ್ಲಿಯೇ ಮುಗಿದ ಹುಟ್ಟುಹಬ್ಬ

  ಮದುವೆ ಯಾವಾಗ? ಇಂಥದ್ದೊಂದು ಪ್ರಶ್ನೆ ಕೇಳಿಕೇಳಿ ಸುಸ್ತಾದ ತಾಪ್ಸಿಯಿಂದ ಖಡಕ್​ ಉತ್ತರ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts