ಚಲಿಸುತ್ತಿದ್ದ ಆಟೋ ಮೇಲೆ ಕಂಟೈನರ್​ ಬಿದ್ದು ಸ್ಥಳದಲ್ಲೇ ನಾಲ್ವರ ದುರ್ಮರಣ

ನವದೆಹಲಿ: ಚಲಿಸುತ್ತಿದ್ದ ಆಟೋ ರಿಕ್ಷಾ ಮೇಲೆ ಕಂಟೈನರ್​ ಬಿದ್ದು ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಐಟಿಒ ಬಳಿ ನಡೆದಿದೆ. ಇಂದು (ಡಿ.18) ಬೆಳಗ್ಗೆ 6.30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟೈನರ್​ ಟ್ರಕ್​ ಚಾಲಕ ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಘಟನೆಯಲ್ಲಿ ಮೃತಪಟ್ಟವರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಸ್ಥಳೀಯರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, … Continue reading ಚಲಿಸುತ್ತಿದ್ದ ಆಟೋ ಮೇಲೆ ಕಂಟೈನರ್​ ಬಿದ್ದು ಸ್ಥಳದಲ್ಲೇ ನಾಲ್ವರ ದುರ್ಮರಣ