More

    ಮದುವೆ ಮುಗಿಸಿ ಬರುವಾಗ ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ: ಸ್ಥಳದಲ್ಲೇ 8 ಮಂದಿ ದುರ್ಮರಣ, ಮೂವರ ಸ್ಥಿತಿ ಗಂಭೀರ

    ಲಖನೌ: ನಿಂತಿದ್ದ ಟ್ರಕ್​ಗೆ ಎಸ್​ಯುವಿ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ 8 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ಭಾನುವಾರ ನಡೆದಿದೆ.

    ಘಟನೆಯಲ್ಲಿ ಮೂರು ಮಂದಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಗೋರಖ್​ಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ದುರ್ಘಟನೆ ಸಂಭವಿಸಿದೆ.

    ಎಸ್​ಯುವಿ ಕಾರಿನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಅತಿ ವೇಗದಲ್ಲಿದ್ದ ಕಾರು ರಸ್ತೆ ಪಕ್ಕದಲ್ಲಿದ್ದ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 8 ಮಂದಿ ಮೃತಪಟ್ಟರೆ, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜೋಗಿಯಾ ಕೊಟ್ವಾಲಿ ಪ್ರದೇಶದ ಬಳಿ ನಡೆದಿದೆ.

    ಎಸ್‌ಯುವಿ ಚಾಲಕ ನಿದ್ರೆಗೆ ಜಾರಿದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತವನ್ನು ನೋಡಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲದೆ, ಗಾಯಾಳುಗಳನ್ನು ಹೊರತರಲು ರಕ್ಷಣಾ ಕಾರ್ಯಾಚರಣೆಗೂ ಸಹಕರಿಸಿದರು.

    ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಳವಳ ವ್ಯಕ್ತಪಡಿಸಿದ್ದು, ಸಾವಿಗೀಡಾದವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮತ್ತೊಂದೆಡೆ, ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿರುವ ಪ್ರಧಾನಿ ಮೋದಿ, ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

    ಪ್ರಧಾನಿ ಮೋದಿ ಅವರು ಪರಿಹಾರವನ್ನು ಘೋಷಿಸಿದ್ದಾರೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿಎಂಎನ್​ಆರ್​ಎಫ್​ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ರೂ. ತಲಾ 50,000. ರೂ. ಪರಿಹಾರ ಘೋಷಣೆ ಮಾಡಿದ್ದಾರೆ. (ಏಜೆನ್ಸೀಸ್​)

    ಧಾರವಾಡ ರಸ್ತೆ ಅಪಘಾತ ಪ್ರಕರಣ: ಮೃತರ ಸಂಖ್ಯೆ 9ಕ್ಕೇ ಏರಿಕೆ, ಅಕ್ಕನ ಬೆನ್ನಲ್ಲೇ ತಂಗಿಯು ಸಾವು

    ಪೆಟ್ರೋಲ್, ಡೀಸೆಲ್ ಮೇಲಿನ ರಾಜ್ಯದ ಸುಂಕ ಕಡಿತ ಪರಿಶೀಲನೆ: ಸಿಎಂ ಬೊಮ್ಮಾಯಿ‌ ಭರವಸೆ

    ನಿಮ್ಮ ಕಣ್ಣಿಗೊಂದು ಸವಾಲ್​: ಈ ಫೋಟೋದಲ್ಲಿರುವ ಬಾಲಕಿಯನ್ನು ಪತ್ತೆಹಚ್ಚಿದ್ರೆ ನಿಮಗೆ ಫುಲ್​ ಮಾರ್ಕ್ಸ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts