ವಿಜಯನಗರದಲ್ಲಿ ಎಸಿ ಸ್ಫೋಟ: ಗಂಡ-ಹೆಂಡತಿ, ಇಬ್ಬರು ಮಕ್ಕಳು ಮಲಗಿದ್ದಲ್ಲೇ ದುರಂತ ಸಾವು

Family
Published on

ವಿಜಯನಗರ: ಎಸಿ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ.

ವೆಂಕಟ್ ಪ್ರಶಾಂತ್​ (42) ಪತ್ನಿ ಡಿ. ಚಂದ್ರಕಲಾ (38 ) ಹಾಗೂ ಮಕ್ಕಳಾದ ಎಚ್.ಎ. ಅರ್ದ್ವಿಕ್(16) ಮತ್ತು ಪ್ರೇರಣಾ (8) ಮೃತ ದುರ್ದೈವಿಗಳು. ರಾಘವೇಂದ್ರ ಶೆಟ್ಟಿ ಎನ್ನುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಮತ್ತು ಎ.ಸಿ ಸ್ಫೋಟದಿಂದ ಮನೆಗೆ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ಆವರಿಸಿದಾಗ ರಾಘವೇಂದ್ರ ಶೆಟ್ಟಿ ಮತ್ತ ಅವರ ಪತ್ನಿ ರಾಜಶ್ರೀ ಅವರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ವೆಂಕಟ್​ ಪ್ರಶಾಂತ್​ ಮತ್ತು ಅವರ ಪತ್ನಿ ಮತ್ತು ಮಕ್ಕಳು ಹೊರಬರಲಾಗದೇ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬೆಳಗಿನ ಜಾವ ಅವಘಡ ನಡೆದಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗ್ನಿಶಾಮಕ ದಳ ಸಂಪೂರ್ಣ ಬೆಂಕಿ ನಂದಿಸಿದೆ. ಎಸಿ ಸ್ಫೋಟದಿಂದ ವಿಷ ಅನಿಲ ಸೋರಿಕೆಯೋ ಅಥವಾ ಬೆಂಕಿ ಹತ್ತಿಕೊಂಡ ಹೊಗೆಗೆ ಉಸಿರುಗಟ್ಟಿತೋ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಡೀ ಏರಿಯಾದ ಕರೆಂಟ್ ತೆಗೆದು ಅಗ್ನಿ ಅವಘಡ ಮತ್ತು ಶಾರ್ಟ್ ಸರ್ಕ್ಯೂಟ್​ಗೆ ಕಾರಣ ಹುಡುಕಲಾಗುತ್ತಿದೆ.

ಘಟನೆ ಸಂಬಂಧ ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net