More

    ವಿಸ್ಮಯ ದುರಂತ ಸಾವು ಪ್ರಕರಣ: ಸರ್ಕಾರಿ ಕೆಲಸ ಕಳೆದುಕೊಂಡ ಹಣದಾಹಿ ಗಂಡ..!

    ತಿರುವನಂತಪುರ: ಬಾಳಿ ಬದುಕಬೇಕಾದ ಹಾಗೂ ಅನೇಕರ ಬದುಕಿನ ಆಶಾಕಿರಣವಾಗಿದ್ದ ಯುವ ವೈದ್ಯೆಯ ಆತ್ಮಹತ್ಯೆ ಪ್ರಕರಣ ಇಡೀ ಕೇರಳದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಗಂಡನ ಹಣ ದಾಹಕ್ಕೆ ಯುವ ವೈದ್ಯೆ ಸಾವಿನ ಹಾದಿ ಹಿಡಿದಳು. ಅದಕ್ಕೂ ಮುಂಚೆ ಗಂಡನ ಅಸಲಿ ಮುಖವಾಡವನ್ನು ಮೃತ ವೈದ್ಯೆ ಬಿಚ್ಚಿಟ್ಟಿದ್ದಳು. ಅಷ್ಟಕ್ಕೂ ಆಕೆಯ ಗಂಡ ಅನಾಗರಿಕನೇನಲ್ಲ. ಆದರೆ, ಆತ ಮಾಡಿದ ಕೆಲಸ ಮಾತ್ರ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು, ವೃತ್ತಿಯಲ್ಲಿ ಕೇರಳದ ಮೋಟಾರು ವಾಹನ ವಿಭಾಗದ ಅಧಿಕಾರಿಯಾಗಿದ್ದ. ಒಳ್ಳೆಯ ಉದ್ಯೋಗ, ಕೈತುಂಬ ಸಂಬಳ ಪಡೆಯುತ್ತಿದ್ದರೂ ಆತನ ಅತಿಯಾದ ದುರಾಸೆ ಯುವ ವೈದ್ಯೆಯ ಪ್ರಾಣವನ್ನೇ ಕಸಿದುಕೊಂಡಿತು. ಇದೀಗ ಕೇರಳ ಸರ್ಕಾರ ಅದಕ್ಕೆ ತಕ್ಕ ಶಿಕ್ಷೆಯಾಗಿ ಆರೋಪಿಯ ಸರ್ಕಾರಿ ಕೆಲಸವನ್ನೇ ಕಸಿದುಕೊಂಡು ಕಂಬಿ ಹಿಂದೆ ತಳ್ಳಿದೆ.

    ಮೃತ ಯುವ ವೈದ್ಯೆಯ ಹೆಸರು ವಿಸ್ಮಯ ನಾಯರ್​. ನೋಡಲು ಸೌಂದರ್ಯವತಿ ಆಗಿದ್ದ ವಿಸ್ಮಯ ವೈದ್ಯೆಯಾಗಿದ್ದಳು. ಗಂಡ ಕಿರಣ್ ಕುಮಾರ್​ ಸಾರಿಗೆ ಅಧಿಕಾರಿಯಾಗಿದ್ದ. ಇಬ್ಬರು ಒಳ್ಳೆಯ ಉದ್ಯೋಗದಲ್ಲೇ ಇದ್ದರೂ. ಸುಂದರ ವೈವಾಹಿಕ ಜೀವನ ನಡೆಸಲು ಇದಕ್ಕಿಂತ ಇನ್ನೇನು ಬೇಕು ಹೇಳಿ. ಆದರೆ, ಗಂಡ ಕಿರಣ್​ ಕುಮಾರ್​ಗೆ ಸಂಬಂಧಗಳಿಗಿಂತ ಹಣದ ಮೌಲ್ಯವೇ ಹೆಚ್ಚಾಗಿತ್ತು. ಪತ್ನಿಗಿಂತ ಹಣದ ಮೇಲಿನ ವ್ಯಾಮೋಹ ಅತಿಯಾಗಿತ್ತು. ಕಿರಣ್​ ಹಣದ ಹಪಾಹಪಿಗೆ ಬಿದ್ದಿದ್ದ.

    ವಿಸ್ಮಯ ದುರಂತ ಸಾವು ಪ್ರಕರಣ: ಸರ್ಕಾರಿ ಕೆಲಸ ಕಳೆದುಕೊಂಡ ಹಣದಾಹಿ ಗಂಡ..!

    ಒಂದು ವರ್ಷದ ಹಿಂದಷ್ಟೇ ಅಂದರೆ, 2020ರ ಮೇ ತಿಂಗಳಲ್ಲಿ ಇಬ್ಬರು ಮದುವೆ ಆಗಿದ್ದರು. ವಿಸ್ಮಯಳ ಮದುವೆಯನ್ನ ಕುಟುಂಬಸ್ಥರು ಅದ್ದೂರಿಯಾಗಿ ಮಾಡಿಕೊಟ್ಟಿದ್ದರು. ದಂಪತಿ ಇಬ್ಬರೂ ಕೇರಳದ ಕೊಲ್ಲಂನಲ್ಲಿ ವಾಸವಿದ್ದರು. ಆದರೆ, ಗಂಡನ ಹಣದಾಹ ಮತ್ತು ಕಿರುಕುಳ ಸಹಿಸದೇ ಜೂನ್​ 21ರ ಸೋಮವಾರ ಬೆಳಗ್ಗೆ ಗಂಡನ ಮನೆಯಲ್ಲಿಯೇ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ದೇಹದ ಮೇಲೆ ಗಾಯದ ಗುರುತುಗಳಾಗಿತ್ತು. ಗಂಡನ ಹಣದಾಹಕ್ಕೆ ವಿಸ್ಮಯ ಬಲಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಸಾವಿಗೂ ಮುನ್ನ ಅಂದರೆ ಭಾನುವಾರ ರಾತ್ರಿ ವಾಟ್ಸ್ಆ್ಯಪ್​ ಮತ್ತು ಫೇಸ್​ಬುಕ್​ನಲ್ಲಿಯೂ ಸೋದರ ಸಂಬಂಧಿ ಜತೆ ಚಾಟ್​ ಮಾಡಿದ್ದ ವಿಸ್ಮಯ, ಬಹುಶಃ ಇದೇ ನನ್ನ ಕೊನೇ ಮೆಸೇಜ್​ ಆಗಬಹುದು. ಗಂಡನ ಕಿರುಕುಳ ಸಹಿಸಲಾಗ್ತಿಲ್ಲ ಎಂದು ಹೇಳಿದ್ದರು. ಗಂಡ ಹಿಂಸೆ ನೀಡಿರುವ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದರು.

    ಮುಖ್ಯಮಂತ್ರಿಯಿಂದಲೂ ಖಂಡನೆ
    ವಿಸ್ಮಯ ಸಾವಿನ ಪ್ರಕರಣ ಕೇರಳದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರೇ ಘಟನೆಯನ್ನು ಖಂಡಿಸಿದ್ದರು. ಅಲ್ಲದೆ, ವಿಶೇಷ ತನಿಖೆ ನಡೆಸುವಂತೆ ಆದೇಶಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ವಿಸ್ಮಯ ಪ್ರಕರಣದ ಬಗ್ಗೆ ಬಹಳ ಚರ್ಚೆ ನಡೆದಿತ್ತು.

    ಅದ್ಧೂರಿ ಮದುವೆ
    ಸಾರಿಗೆ ಅಧಿಕಾರಿಯಾಗಿದ್ದ ಕಿರಣ್​ ಜತೆ ಮದುವೆ ಮಾಡಿಕೊಡಲು ವರದಕ್ಷಿಣೆಯಾಗಿ 800 ಗ್ರಾಂ ಚಿನ್ನ, ಒಂದು ಎಕರೆಗೂ ಅಧಿಕ ಜಮೀನು, 10 ಲಕ್ಷ ಮೌಲ್ಯದ ಕಾರನ್ನು ವಿಸ್ಮಯ ಪಾಲಕರು ನೀಡಿದ್ದರು. ಮದುವೆ ನಂತರವೂ ಕಿರಣ್​ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಇದನ್ನು ಸಹಿಸದ ವಿಸ್ಮಯ ಒಮ್ಮೆ ತವರಿಗೂ ಹೋಗಿದ್ದಳು. ಬಳಿಕ ಹಿರಿಯರ ಮುಂದೆ ಸಂಧಾನ ನಡೆದು ಮತ್ತೆ ಗಂಡನ ಮನೆ ಸೇರಿದ್ದಳು. ಕೊನೆಗೆ ಆತನ ಕಾಟವನ್ನು ಸಹಿಸದೇ ಇನ್ನೆಂದು ಮತ್ತೆ ಬಾರದ ಲೋಕಕ್ಕೆ ಕಣ್ಣೀರಿನ ವಿದಾಯ ಹೇಳಿದ್ದಾಳೆ.

    ವಿಸ್ಮಯ ದುರಂತ ಸಾವು ಪ್ರಕರಣ: ಸರ್ಕಾರಿ ಕೆಲಸ ಕಳೆದುಕೊಂಡ ಹಣದಾಹಿ ಗಂಡ..!

    ಕೆಲಸದಿಂದಲೇ ವಜಾ
    ಘಟನೆಯ ಬೆನ್ನಲ್ಲೇ ಕಿರಣ್​ನನ್ನು ಕೇರಳ ಪೊಲೀಸರು ಬಂಧಿಸಿದ್ದರು. ಅಲ್ಲದೆ, ಅವರನ್ನು ಕೆಲಸದಿಂದ ಆ ಕ್ಷಣದಲ್ಲಿ ಅಮಾನತುಗೊಳಿಸಲಾಗಿತ್ತು. ಇದೀಗ ಪ್ರಕರಣದ ತನಿಖೆ ನಡೆಯುತ್ತಿದ್ದು, ಆರೋಪಿಯ ವಿರುದ್ಧ ಬಲವಾದ ಸಾಕ್ಷಿಗಳು ಲಭ್ಯವಾಗಿವೆ. ಇದರ ನಡುವೆ ಕಿರಣ್​ರನ್ನು ಶಾಶ್ವತವಾಗಿ ಸರ್ಕಾರಿ ಕೆಲಸದಿಂದ ವಜಾಗೊಳಿಸಲಾಗಿದೆ. 35 ವರ್ಷದ ಕಿರಣ್​ ಕುಮಾರ್​ ಕೇರಳ ಮೋಟಾರು ವಾಹನ ವಿಭಾಗದ ಅಧಿಕಾರಿಯಾಗಿದ್ದ.

    ಕೇರಳದ ಸಾರಿಗೆ ಸಚಿವ ಆಂಟೋನಿ ರಾಜು ಇಲಾಖೆಯ ಕಾಳಜಿ ದೃಷ್ಟಿಯಿಂದ ಕಿರಣ್​ ಕುಮಾರ್​ ವಿರುದ್ಧ ತನಿಖೆ ನಡೆಸಲು 45 ದಿನಗಳ ಕಾಲಾವಕಾಶ ನೀಡಿದ್ದರು. ನಿನ್ನೆಗೆ ತನಿಖೆ ಸಂಪೂರ್ಣವಾಗಿದ್ದು, ಪೊಲೀಸರು ತನಿಖಾ ವರದಿಯನ್ನು ಸಚಿವರ ಮುಂದೆ ಪ್ರಸ್ತುತ ಪಡಿಸಿದ್ದಾರೆ. ಅದರಲ್ಲಿ ಕಿರಣ್​ ಕುಮಾರ್​ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿರುವುದರಿಂದ ಕೆಲಸದಿಂದಲೇ ವಜಾಗೊಳಿಸಲಾಗಿದೆ. ಸದ್ಯ ಆರೋಪಿ ಕಿರಣ್​ ವಿರುದ್ಧ ತನಿಖೆ ಮುಂದುವರಿದಿದ್ದು, ಬಂಧನದಲ್ಲಿದ್ದಾನೆ. (ಏಜೆನ್ಸೀಸ್​)

    ವರದಕ್ಷಿಣೆಗೆ ವೈದ್ಯೆ ಬಲಿ! ಸಾವಿಗೂ ಮುನ್ನ ಸೋದರನ ಬಳಿ ಆಕೆ ಬಿಚ್ಚಿಟ್ಟ ನೋವಿನ ಸಂದೇಶ ಇಲ್ಲಿದೆ

    ಗಂಡನ ಕಿರುಕುಳಕ್ಕೆ ಯುವ ವೈದ್ಯೆ ಸಾವು: 2 ವರ್ಷದ ಹಿಂದೆ ನಟನಿಗೆ ಲವ್​ ಲೆಟರ್​ ಬರೆದಿದ್ದ ವಿಸ್ಮಯ!

    2 ದಿನದ ಅಂತರದಲ್ಲಿ ಮೂವರು ಯುವತಿಯರ ದುರಂತ ಸಾವು: ಸಾಕ್ಷರತಾ ರಾಜ್ಯ ಕೇರಳಕ್ಕೆ ಕಪ್ಪುಚುಕ್ಕೆ

    ಪತ್ನಿಯ ದುರಂತ ಸಾವು: ಜೀವನ ಸಂಗಾತಿಗೆ ನರಕ ತೋರಿದ ಸಾರಿಗೆ ಅಧಿಕಾರಿಗೆ ಸರ್ಕಾರದ ಶಾಕ್​!

    ಶೌಚಗೃಹಕ್ಕೆ ಹೋದ ಇನ್ಸ್​ಪೆಕ್ಟರ್​ ಪತ್ನಿ ತುಂಬಾ ಹೊತ್ತು ಬರಲೇ ಇಲ್ಲ: ಬಾಗಿಲು ತೆರೆದ ಪತಿಗೆ ಕಾದಿತ್ತು ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts