More

    ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಯತ್ನ? ನಟಿ ಭಾಮಾ ಕೊಟ್ಟ ಸ್ಪಷ್ಟನೆ ಹೀಗಿದೆ…

    ಕೊಚ್ಚಿ: ಹೆಚ್ಚು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಯತ್ನಿಸಿರುವ ನಟಿ ಭಾಮಾ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 2017ರಲ್ಲಿ ಖ್ಯಾತ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಡೆದಿರುವ ಹೊಸ ಬೆಳವಣಿಗೆಗೆ ಹೆದರಿ ಭಾಮಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸುದ್ದಿ ಹಬ್ಬಿಸಿದ್ದಾರೆ.

    ನಟಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ನಟಿ ಭಾಮಾ ಕೂಡ ಪ್ರಮುಖ ಸಾಕ್ಷ್ಯಾಧಾರರಲ್ಲಿ ಒಬ್ಬರು. ಆದರೆ, ವಿಚಾರಣೆಯ ವೇಳೆ ಉಲ್ಟಾ ಹೊಡೆದಿರುವ ಆರೋಪ ಹೊತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ತನಿಖಾ ತಂಡ ಈ ಪ್ರಕರಣದಲ್ಲಿ ಉಲ್ಟಾ ಹೊಡೆದವರ ಹಣಕಾಸು ವ್ಯವಹಾರವನ್ನು ಪರಿಶೀಲಿಸಿದ್ದು, ಕೆಲವು ಮಹತ್ವದ ಸುಳಿವುಗಳು ದೊರೆತಿವೆ ಎಂದು ಹೇಳಲಾಗಿದೆ. ನಿರ್ದೇಶಕ ಮತ್ತು ಪ್ರಮುಖ ಆರೋಪಿ ದಿಲೀಪ್​ ಅವರ ಆಪ್ತ ಬಾಲಚಂದ್ರ ಕುಮಾರ್​ ನೀಡಿದ ಸ್ಪೋಟಕ ಹೇಳಿಕೆ ಆಧಾರದ ಮೇಲೆ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆಯುತ್ತಿದೆ.

    ಆತ್ಮಹತ್ಯೆ ಯತ್ನ ಸುದ್ದಿ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ನಟಿ ಭಾಮಾ, ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸ್ಪಷ್ಟನೆಯನ್ನು ನೀಡಿದ್ದಾರೆ. ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಕೇವಲ ವದಂತಿಯಷ್ಟೆ. ನಾನು ಮತ್ತು ನನ್ನ ಕುಟುಂಬ ಆರೋಗ್ಯಯುತವಾಗಿದ್ದೇವೆ. ನನ್ನ ಹೆಸರಿನಲ್ಲಿ ಇತ್ತೀಚೆಗೆ ಕೆಲವು ಆರೋಪಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಆದರೆ ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ಕಾಳಜಿ ಹೊಂದಿರುವವರಿಗೆ, ನಾವು ಉತ್ತಮ ಆರೋಗ್ಯ ಮತ್ತು ಉತ್ಸಾಹದಲ್ಲಿದ್ದೇವೆ ಎಂಬುದನ್ನು ತಿಳಿಯಲು ಇಚ್ಛಿಸುತ್ತೇನೆ. ನಿಮ್ಮ ಪ್ರೀತಿಗೆ ಧನ್ಯವಾದಗಳು ಎಂದು ಭಾಮಾ ಅವರು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    ನಟಿ ಭಾಮಾ ಪ್ರಖ್ಯಾತ ಮಲಯಾಳಂ ನಟಿ. ಕೇವಲ ಮಲಯಾಳಂ ಮಾತ್ರವಲ್ಲದೆ, ಅನೇ ಕನ್ನಡ ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡ ಸಿನಿರಸಿಕರ ಮನದಲ್ಲೂ ಭಾಮಾ ಗಟ್ಟಿಯಾಗಿ ನೆಲೆಸಿದ್ದಾರೆ. 2020ರ ಜನವರಿಯಲ್ಲಿ ಅರುಣ್​ ಎಂಬ ಉದ್ಯಮಿಯನ್ನು ಭಾಮಾ ಮದುವೆಯಾಗಿದ್ದು, ಸಿನಿಮಾ ಕ್ಷೇತ್ರದಿಂದ ತುಂಬಾ ಅಂತರ ಕಾಯ್ದುಕೊಂಡಿದ್ದಾರೆ. ಕಳೆದ ವರ್ಷ ತಾನೇ ಭಾಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇತ್ತೀಚೆಗಷ್ಟೇ ಮಗಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದರು.

    ಸಿನಿಮಾ ವಿಚಾರಕ್ಕೆ ಬಂದರೆ, ಭಾಮಾ ಅವರು ಕೊನೆಯದಾಗಿ 2018 ರಲ್ಲಿ ಬಿಡುಗಡೆಯಾದ ಮಲಯಾಳಂ ಚಲನಚಿತ್ರ ‘ಖಿಲಾಫತ್’ ನಲ್ಲಿ ಕಾಣಿಸಿಕೊಂಡರು. (ಏಜೆನ್ಸೀಸ್​)

    ಖ್ಯಾತ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ವಿಡಿಯೋ ಕುರಿತು ಸ್ಫೋಟಕ ಹೇಳಿಕೆ ಕೊಟ್ಟ ನಟ ದಿಲೀಪ್​!

    ಸೋಲದೇವನಹಳ್ಳಿ ಡಾಬಾಗೆ ಬೆಂಕಿ ಹಚ್ಚಲು ಸುಪಾರಿ ಕೊಟ್ಟದ್ದೇ ಮಾಲೀಕನ ಪತ್ನಿ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

    ಬಾಲಕಿಗೆ ಗರ್ಭಪಾತ ಕೇಸ್​: ಆಸ್ಪತ್ರೆ ಆವರಣದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ 11 ತಲೆಬುರುಡೆ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts