More

    ಹಾಸ್ಟೆಲ್​ ಸಿಬ್ಬಂದಿಯ ಮೊಬೈಲ್​ನಲ್ಲಿ ತಮ್ಮ ಸ್ನಾನದ ವಿಡಿಯೋ ನೋಡಿ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು: ಚಂಡೀಗಢ ಬಳಿಕ ಕಾನ್ಪುರ್​ನಲ್ಲಿ ಘಟನೆ

    ಕಾನ್ಪುರ್​: ಪಂಜಾಬ್​ನ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್​ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೀಡಾಗಿರುವ ಬೆನ್ನಲ್ಲೇ ಅಂಥದ್ದೇ ಪ್ರಕರಣ ಇದೀಗ ಉತ್ತರ ಪ್ರದೇಶ ಕಾನ್ಪುರ್​ನಲ್ಲಿ ಕೇಳಿಬಂದಿದೆ.

    ಹಾಸ್ಟೆಲ್​​ನ ಸಿಬ್ಬಂದಿಯೇ ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋವನ್ನು ರೆಕಾರ್ಡ್​ ಮಾಡುತ್ತಿದ್ದಾರೆ ಎಂದು ಒಂದು ಗುಂಪಿನ ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ.

    ಸಾಯಿ ನಿವಾಸ್ ಹೆಸರಿನ ಹುಡುಗಿಯರ ಹಾಸ್ಟೆಲ್‌ ಸಿಬ್ಬಂದಿ ವಿರುದ್ಧ ಆರೋಪ ಕೇಳಿಬಂದಿದೆ. ಹಾಸ್ಟೆಲ್ ಉದ್ಯೋಗಿಯೊಬ್ಬರ ಫೋನ್‌ನಲ್ಲಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ಬಗ್ಗೆ ಸ್ಥಳೀಯ ಪೊಲೀಸರು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ.

    ನಾವು ದೂರು ದಾಖಲಿಸಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರು ಪೊಲೀಸ್ ಠಾಣೆಯ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ಈ ಬಗ್ಗೆ ಮಾತನಾಡಿರುವ ಪೊಲೀಸರು ಪ್ರಕರಣ ದಾಖಲಿಸಿ, ನೌಕರನನ್ನು ಸಹ ಬಂಧಿಸಲಾಗಿದೆ ಎಂದು ಸಮರ್ಥಿಸಿಕೊಂಡರು. ಅಲ್ಲದೆ, ಮೊಬೈಲ್ ಅನ್ನು ಫೋರೆನ್ಸಿಕ್ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದರು.

    ಚಂಡೀಗಢ ವಿವಿ ಪ್ರಕರಣದ ಹಿನ್ನೆಲೆ
    ಅಶ್ಲೀಲ ವಿಡಿಯೋ ಸೋರಿಕೆಯಾಗಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮೊಹಾಲಿಯಲ್ಲಿರುವ ಖಾಸಗಿ ವಿವಿ ಕ್ಯಾಂಪಸ್​ಗೆ ಸೆ.17ರ ರಾತ್ರಿ ಜಮಾಯಿಸಿ, ಘಟನೆಯ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು. ವಿದ್ಯಾರ್ಥಿನಿಯರು ಹಾಸ್ಟೆಲ್​ನಲ್ಲಿ ಸ್ನಾನ ಮಾಡುವಾಗ ಆರೋಪಿ ವಿದ್ಯಾರ್ಥಿನಿ ರಹಸ್ಯವಾಗಿ ಚಿತ್ರೀಕರಣ ಮಾಡಿದ್ದಾಳೆ ಎಂದು ಆರೋಪಿಸಿ, ಆಕ್ರೋಶ ಹೊರಹಾಕಿದರು. ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಎಫ್​ಐಆರ್​ ದಾಖಲಿಸಿದ ಪೊಲೀಸರು ಆರೋಪಿ ವಿದ್ಯಾರ್ಥಿನಿಯನ್ನು ಬಂಧಿಸಿದರು. ಇದಾದ ಬೆನ್ನಲ್ಲೇ ಉಳಿದ ಇನ್ನಿಬ್ಬರು ಆರೋಪಿಗಳನ್ನು ಸಹ ಬಂಧಿಸಲಾಯಿತು. ಮೂವರು ಆರೋಪಿಗಳ ಫೋನ್‌ಗಳನ್ನೂ ಪೊಲೀಸರು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದರು.

    ವಿದ್ಯಾರ್ಥಿನಿಯು ಹಾಸ್ಟೆಲ್​ನಲ್ಲಿ ತನ್ನೊಂದಿಗೆ ಇದ್ದ ಸಹಪಾಠಿಗಳ ಎಂಎಂಎಸ್ ಕ್ಲಿಪ್‌ಗಳನ್ನು ರಹಸ್ಯವಾಗಿ ಚಿತ್ರೀಕರಿಸಿದ್ದು, ಅವುಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾದ ಬಾಯ್​ಫ್ರೆಂಡ್​ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಆರೋಪಿ ಕಳುಹಿಸುತ್ತಿದ್ದ ಎಂಎಂಎಸ್ ಕ್ಲಿಪ್‌ಗಳನ್ನು ಪಡೆದ ವ್ಯಕ್ತಿ ಅಂತರ್ಜಾಲದಲ್ಲಿ ಅಪ್‌ಲೋಡ್ ಮಾಡಿರುವುದಾಗಿ ತಿಳಿದುಬಂದಿದೆ. ಅವುಗಳನ್ನು ನೋಡಿ ವಿದ್ಯಾರ್ಥಿನಿಯರು ಶಾಕ್​ ಆಗಿದ್ದು, ಪ್ರತಿಭಟನೆಯನ್ನು ನಡೆಸಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿನಿಯರ 50 ರಿಂದ 60 ವೀಡಿಯೋಗಳಿವೆ. ಆಕೆ ಅದನ್ನು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾಳೆ. ನಾವು ಘಟನೆಯ ಬಗ್ಗೆ ಪ್ರಶ್ನಿಸಿದಾಗ, ವಿಡಿಯೋ ಮಾಡಿರುವುದಾಗಿ ಒಪ್ಪಿಕೊಂಡಳು ಮತ್ತು ವಿಡಿಯೋಗಳನ್ನು ಡಿಲೀಟ್​ ಮಾಡಿದಳು ಎಂದು ವಿದ್ಯಾರ್ಥಿನಿಯೊಬ್ಬಳು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ.

    ರಹಸ್ಯವಾಗಿ ವಿಡಿಯೋ ಚಿತ್ರೀಕರಣ ನಡೆದಿರುವುದು ಸತ್ಯ. ವಿವಿಗೆ ಕೆಟ್ಟ ಹೆಸರು ಬರುತ್ತದೆ ಅಂತಾ ಕಾಲೇಜು ಆಡಳಿತವು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಹಾಸ್ಟೆಲ್ ವಿದ್ಯಾರ್ಥಿನಿಯರು ಮಾಧ್ಯಮದ ಮುಂದೆ ಗಂಭೀರ ಆರೋಪ ಮಾಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿರ್ದೇಶನದ ಮೇರೆಗೆ, ಪ್ರಕರಣದ ತನಿಖೆಗಾಗಿ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ವಿಶ್ವವಿದ್ಯಾನಿಲಯವು ಸಹ ಒಂಬತ್ತು ಸದಸ್ಯರ ಸಮಿತಿಯನ್ನು ಸಹ ರಚಿಸಿದೆ. ಸದ್ಯ ತನಿಖೆ ನಡೆಯುತ್ತಿದೆ. (ಏಜೆನ್ಸೀಸ್​)

    ನಸುಕಿನ ಜಾವ ನವರಾತ್ರಿ ಪೂಜೆಗೆ ತೆರಳಿದ್ದ ಯುವತಿಯರಿಗೆ ಶಾಕ್​: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

    ತಾತನಾದ ಜನಾರ್ದನ ರೆಡ್ಡಿ; ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್​ಗೆ ಮನವಿ

    ಕಾಂಡೋಮ್​ ಬೇಕಾ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಮಹಿಳಾ ಅಧಿಕಾರಿಗೆ ಎದುರಾಯ್ತು ಸಂಕಷ್ಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts