More

    ಸೋನಿಯಾ, ರಾಹುಲ್​ ಗಾಂಧಿ ವಿಚಾರಣೆ ಬೆನ್ನಲ್ಲೇ ನ್ಯಾಷನಲ್​ ಹೆರಾಲ್ಡ್​ ಮುಖ್ಯ ಕಚೇರಿ ಮೇಲೆ ಇಡಿ ದಾಳಿ

    ನವದೆಹಲಿ: ನ್ಯಾಷನಲ್​ ಹೆರಾಲ್ಡ್​ ಪ್ರಕರಣ ಸಂಬಂಧ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ಹಾಗೂ ವಯನಾಡು ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಅವರ ವಿಚಾರಣೆ ಬೆನ್ನಲ್ಲೇ ನ್ಯಾಷನಲ್​ ಹೆರಾಲ್ಡ್​ ಪತ್ರಿಕೆಯ ಮುಖ್ಯ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ (ಆಗಸ್ಟ್​ 2) ದಿಢೀರ್​ ದಾಳಿ ಮಾಡಿದ್ದಾರೆ.

    ನ್ಯಾಷನಲ್​ ಹೆರಾಲ್ಡ್​ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿಯ ಹಲವು ಪ್ರದೇಶಗಳ ಮೇಲೆ ಇಡಿ ದಾಳಿ ನಡೆಸಿದೆ. ಕಾಂಗ್ರೆಸ್​ ಮಾಲೀಕತ್ವದ ನ್ಯಾಷನಲ್​ ಹೆರಾಲ್ಡ್​ ಪತ್ರಿಕೆಯ ಮುಖ್ಯ ಕಚೇರಿಯು ಸೇರಿದಂತೆ ಒಟ್ಟು 12 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಇಡಿ ಮೂಲಗಳು ತಿಳಿಸಿವೆ.

    ಕೋಲ್ಕತದ ಕೆಲವು ಪ್ರದೇಶಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ಮಾಹಿತಿ ಇದೆ.

    ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ವಾರ (ಜುಲೈ 27) ಮೂರನೇ ಬಾರಿಗೆ ಇಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮೂರು ಗಂಟೆಗಳ ಕಾಲ ಇಡಿ ಪ್ರಶ್ನಿಸಿದೆ. ರಾಹುಲ್​ ಗಾಂಧಿ ಕೂಡ ವಿಚಾರಣೆಯನ್ನು ಎದುರಿಸಿದ್ದಾರೆ.

    ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?
    ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.

    2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.

    ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿತು. (ಏಜೆನ್ಸೀಸ್​)

    ಕಾಬೂಲ್​ ದಾಳಿಯಲ್ಲಿ ಅಮೆರಿಕ ಉಡೀಸ್​ ಮಾಡಿದ ಈ ಭಯಾನಕ ಉಗ್ರ ಕರ್ನಾಟಕದಲ್ಲೂ ಫೇಮಸ್​! ಯಾಕೆ ಅಂತೀರಾ?

    ವೃದ್ಧರಿಬ್ಬರಿಗೆ ಬೆತ್ತಲೆ ವಿಡಿಯೋ ಕಾಲ್​ ಮಾಡಿ 3.63 ಲಕ್ಷ ರೂ. ವಸೂಲಿ ಮಾಡಿದ ಐನಾತಿ ಲೇಡಿ

    ವಿಆರ್​ಎಲ್ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಹುಟ್ಟುಹಬ್ಬ: ವಿಜಯಾನಂದ ಚಿತ್ರತಂಡದಿಂದ ಟೀಸರ್ ಗಿಫ್ಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts