

ಚೆನ್ನೈ: ತಲಾ ಅಜಿತ್ ಅಭಿನಯದ ಕಾಲಿವುಡ್ ಸೂಪರ್ ಡೂಪರ್ "ಯೆನ್ನೈ ಅರಿಂದಾಲ್" ಮತ್ತು "ವಿಶ್ವಾಸಂ" ಚಿತ್ರಗಳಲ್ಲಿ ಮಗಳ ಪಾತ್ರದಲ್ಲಿ ಬಾಲ ನಟಿಯಾಗಿ ನಟಿಸುವ ಮೂಲಕ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಅನಿಕಾ ಸುರೇಂದ್ರನ್, ಇದೀಗ ನಾಯಕಿಯಾಗಿ ಅನೇಕ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅನಿಕಾ ಅವರ ವಯಸ್ಸು 19. ದಕ್ಷಿಣ ಭಾರತದ ಭರವಸೆಯ ನಾಯಕಿಯಾಗುವ ಎಲ್ಲ ಲಕ್ಷಣಗಳು ಅನಿಕಾರಲ್ಲಿದೆ.
ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಅನಿಕಾ, ಆಗಾಗ ತಮ್ಮ ಸ್ಟೈಲಿಶ್ ಫೋಟೋಗಳನ್ನು ಹರಿಬಿಡುವ ಮೂಲಕ ಅಭಿಮಾನಿಗಳ ಮನತಣಿಸುತ್ತಿರುತ್ತಾರೆ. ಅಲ್ಲದೆ, ಜಾಲತಾಣದಲ್ಲಿ ಲೈವ್ ಬರುವ ಮೂಲಕ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸುತ್ತಿರುತ್ತಾರೆ.
ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದಿದ್ದ ಅನಿಕಾ ಪ್ರಶ್ನೋತ್ತರ ಸೆಷನ್ ನಡೆಸಿದ್ದರು. ಈ ವೇಳೆ ನೆಟ್ಟಿಗರೊಬ್ಬರು ಒಳಉಡುಪಿನ ಬಗ್ಗೆ ಕೇಳಿದ ಪ್ರಶ್ನೆಗೆ ಅನಿಕಾ ಸ್ವಲ್ಪವೂ ಮುಜಗರಪಟ್ಟುಕೊಳ್ಳದೇ ಉತ್ತರಿಸಿದ್ದಾರೆ. ಆ ಪ್ರಶ್ನೆ ಏನೆಂಬುದನ್ನು ತಿಳಿಯಲು ಮುಂದೆ ಓದಿ...
ಇದು ಸ್ವಲ್ಪ ವಿಚಿತ್ರ ಅನಿಸಬಹುದು ಆದರೆ, ನನಗೆ ಬ್ರಾಗಳ ಬಗ್ಗೆ ಸಲಹೆ ಬೇಕಿದೆ. ನೀವು ಯಾವುದನ್ನು ಬಳಸುತ್ತೀರಿ ಹೇಳಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಲ್ಪವೂ ಸಂಕೋಚ ಪಟ್ಟುಕೊಳ್ಳದ ಅನಿಕಾ, ಹತ್ತಿಯಲ್ಲಿ ಮಾಡಿದ ಸರಿಯಾದ ಗಾತ್ರದ ಬ್ರಾಗಳನ್ನು ನಿಮಗೆ ಸಲಹೆ ನೀಡುತ್ತೇನೆ. ಜಿವಾಮೆಯಂತಹ ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ನಾನು ಖರೀದಿಸುತ್ತೇನೆ ಎಂದಿದ್ದಾರೆ.
ಲೈವ್ ಸ್ಕ್ರೀನ್ ಶಾಟ್ಗಳನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಅನಿಕಾ ಶೇರ್ ಮಾಡಿಕೊಂಡಿದ್ದು, ಅವರ ಬೋಲ್ಡ್ನೆಸ್ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ, ತೆಲುಗಿನ ಬುಟ್ಟಬೊಮ್ಮಾ ಸಿನಿಮಾದಲ್ಲಿ ಅನಿಕಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ನಾಗಾರ್ಜುನ ಅವರು ನಿರ್ಮಾಣ ಮಾಡುತ್ತಿದ್ದಾರೆ. (ಏಜೆನ್ಸೀಸ್)