More

    ಯೂಟ್ಯೂಬರ್ಸ್​ ಮತ್ತು ವೆಬ್​ಸೈಟ್​ಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸಚಿವ ಅನುರಾಗ್​ ಠಾಕೂರ್​

    ನವದೆಹಲಿ: ಭಾರತೀಯ ವಿರೋಧಿ ಪ್ರಚಾರ ಹಾಗೂ ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಎರಡು ವೆಬ್​ಸೈಟ್​ ಮತ್ತು 20 ಯೂಟ್ಯೂಬ್​ ಚಾನೆಲ್​ಗಳನ್ನು ಬ್ಲಾಕ್​ ಮಾಡಿರುವ ಬೆನ್ನಲ್ಲೇ ಬುಧವಾರ ಮತ್ತೊಮ್ಮೆ ಎಚ್ಚರಿಕೆ ನೀಡಿರುವ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್​ ಠಾಕೂರ್, ದೇಶದ ವಿರುದ್ಧ ಷಡ್ಯಂತ್ರ ರೂಪಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

    ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆದೇಶ ಹೊರಡಿಸಿದ್ದೇನೆ. ವಿಶ್ವದ ಅನೇಕ ದೇಶಗಳು ಕೂಡ ಗಂಭೀರವಾಗಿ ಪರಿಗಣಿಸಿರುವುದನ್ನು ನೋಡಿ ಖುಷಿಯಾಯಿತು. ಯೂಟ್ಯೂಬ್​ ಕೂಡ ಮುಂದೆ ಬಂದು ಸುಳ್ಳು ಸುದ್ದಿ ಹರಡುವವರನ್ನು ಬ್ಲಾಕ್​ ಮಾಡುತ್ತಿದೆ ಎಂದು ಮಾಧ್ಯಮಗಳಿಗೆ ಠಾಕೂರ್​ ತಿಳಿಸಿದರು.

    ಗುಪ್ತಚರ ಏಜೆನ್ಸಿಗಳೊಂದಿಗೆ ನಿಕಟ ಸಂಪರ್ಕದಲ್ಲಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 2021ರ ಡಿಸೆಂಬರ್​ನಲ್ಲಿ 20 ಯೂಟ್ಯೂಬ್ ಚಾನೆಲ್‌ಗಳು ಮತ್ತು ಎರಡು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಆದೇಶ ನೀಡಿತು. ಭಾರತ ವಿರೋಧಿ ಪ್ರಚಾರ ಮತ್ತು ನಕಲಿ ಸುದ್ದಿಗಳನ್ನು ಹರಡುತ್ತಿದ್ದರಿಂದ ಈ ಕ್ರಮಗಳನ್ನು ಕೈಗೊಂಡಿದೆ.

    ಭಾರತದ ವಿರುದ್ಧ ಷಡ್ಯಂತ್ರ ರೂಪಿಸುವ ಯೂಟ್ಯೂಬ್​ ಚಾನೆಲ್​ಗಳನ್ನು ಭವಿಷ್ಯದಲ್ಲೂ ಕೂಡ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

    ಈಗಾಗಲೇ ಬ್ಲಾಕ್​ ಆಗಿರುವ ಚಾನೆಲ್​ಗಳು ಕಾಶ್ಮೀರ, ಭಾರತೀಯ ಸೇನೆ, ಭಾರತದಲ್ಲಿನ ಅಲ್ಪಸಂಖ್ಯಾತ ಸಮುದಾಯಗಳು, ರಾಮಮಂದಿರ, (ದಿವಂಗತ ಸಿಡಿಎಸ್) ಜನರಲ್ ಬಿಪಿನ್ ರಾವತ್ ಮುಂತಾದ ವಿಷಯಗಳ ಕುರಿತು ದೇಶ ವಿಭಜಿಸುವ ವಿಷಯವನ್ನು ಪ್ರಸಾರ ಮಾಡಿವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. (ಏಜೆನ್ಸೀಸ್​)

    ಕೆಲವೇ ತಿಂಗಳ ಹಿಂದೆ ನಿಕ್ಕಿ ಗಲ್ರಾನಿ ಮನೆಯಲ್ಲಿ ಕೆಲ್ಸಕ್ಕೆ ಸೇರಿದ್ದ ಯುವಕನಿಂದ ನೀಚ ಕೃತ್ಯ..!

    ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು: ಸ್ವಕ್ಷೇತ್ರದಲ್ಲೇ ಮುಖಭಂಗ

    ಕರೊನಾ ಲಸಿಕೆ ನೀಡಲು ಬಂದ ಆರೋಗ್ಯಾಧಿಕಾರಿಯನ್ನು ಕೆಳಗೆ ಕೆಡವಿ ಹಲ್ಲೆಗೆ ಯತ್ನ: ಮರವೇರಿದ ಮತ್ತೊಬ್ಬ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts