More

    ಸಮಾಜವಾದಿ ಪಕ್ಷಕ್ಕೆ ಗುಡ್​ಬೈ ಹೇಳಿ ಬಿಜೆಪಿ ಸೇರಿದ ಮುಲಾಯಂ ಸಿಂಗ್ ಯಾದವ್​ ಕಿರಿಯ ಸೊಸೆ

    ಲಖನೌ: ಉತ್ತರ ಪ್ರದೇಶದ ಚುನಾವಣೆ ಇನ್ನೇನು ಸಮೀಪಿಸುತ್ತಿದೆ. ಈಗಾಗಲೇ ಇಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಸಚಿವರು, ಶಾಸಕರು ಸೇರಿದಂತೆ ಕೆಲ ಬಿಜೆಪಿ ಧುರೀಣರು ತಮ್ಮ ಪಕ್ಷ ಬಿಟ್ಟು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸೇರ್ಪಡೆಗೊಳ್ಳುತ್ತಿದ್ದರೆ, ಅದೇ ಇನ್ನೊಂದೆಡೆ ಬಿಎಸ್‌ಪಿ ಬಿಟ್ಟು ಬಿಜೆಪಿ ಸೇರುವವರೂ ಹೆಚ್ಚಾಗುತ್ತಿದ್ದಾರೆ.

    ಸಮಾಜವಾದಿ ಪಕ್ಷದ ನಾಯಕಿ ಅಪರ್ಣಾ ಯಾದವ್ ಅವರು ಪಕ್ಷವನ್ನು ತೊರೆದು ಇಂದು (ಜ.19) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅಪರ್ಣಾ ಯಾದವ್​ ಅವರು ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ. ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಅವರ ಸಹೋದರ ಪ್ರತೀಕ್​ ಯಾದವ್​ ಅವರ ಪತ್ನಿ.

    ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅಪರ್ಣಾ ಯಾದವ್, ನಾನು ಬಿಜೆಪಿಗೆ ತುಂಬಾ ಕೃತಜ್ಞಳಾಗಿದ್ದೇನೆ. ನನಗೆ ರಾಷ್ಟ್ರೀಯತೆಯೇ ಮೊದಲು. ಪ್ರಧಾನಿ ಮೋದಿಯವರ ಕೆಲಸವನ್ನು ನಾನು ಮೆಚ್ಚುತ್ತೇನೆಂದು ಹೇಳಿದರು.

    ಸಚಿವರು ಸೇರಿದಂತೆ ಹಲವು ಹಿಂದುಳಿದ ವರ್ಗಗಳ ನಾಯಕರು ಇತ್ತೀಚೆಗೆ ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಆಡಳಿತಾರೂಢ ಬಿಜೆಪಿಗೆ ದೊಡ್ಡ ಹೊಡೆತವಾಗಿದ್ದು, ಇದೀಗ ಎಸ್​ಪಿಯ ಪ್ರಮುಖ ನಾಯಕಿ ಬಿಜೆಪಿ ಸೇರಿರುವುದು ಬಿಜೆಪಿಗೆ ಸ್ವಲ್ಪ ಮಟ್ಟಿನ ಸಮಧಾನವಾಗಿದೆ.

    ಮೊದಲಿನಿಂದಲೂ ಎನ್​ಡಿಎ ಸರ್ಕಾರದ ನೀತಿಗಳನ್ನು ಬೆಂಬಲಿಸುತ್ತಿದ್ದ ಇವರು ಇದೀಗ ಬಿಜೆಪಿ ಸೇರಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಿಎಸ್‌ಪಿಯಿಂ ಸ್ಪರ್ಧಿಸಿ ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಪರಾಭವಗೊಂಡಿದ್ದರು. ಆದರೆ ಇದೀಗ ಬಿಜೆಪಿ ಸೇರಿದ್ದು, ಇದು ಸಮಾಜವಾದಿ ಪಕ್ಷಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ. (ಏಜೆನ್ಸೀಸ್​)

    ಈ ವಿಷಯದಲ್ಲಿ ಟಾಲಿವುಡ್​ ಬೆಸ್ಟ್​ ಅಂತೆ: ಕನ್ನಡ ಸಿನಿ ಇಂಡಸ್ಟ್ರಿ ವಿರುದ್ಧ ಅಪ್ಸರಾ ರಾಣಿ ಗಂಭೀರ ಆರೋಪ

    ತಂಗಿ ಸತ್ತರೂ ಯಾರಿಗೂ ಹೇಳದೆ 4 ದಿನ ಶವದ ಜತೆ ಒಬ್ಬಳೇ ಇದ್ದ ಅಕ್ಕ! ಇವರಿಬ್ಬರ ಬದುಕೇ ಕರುಣಾಜನಕ

    ಬರೋಬ್ಬರಿ 10 ವರ್ಷ ಸರ್ಕಾರದ ಕಣ್ಣಿಗೆ ಮಣ್ಣೆರಚಿ ಸರ್ಕಾರಿ ಸಂಬಳ ಗಿಟ್ಟಿಸಿದ ಈತ ಸಿಕ್ಕಿಬಿದ್ದಿದ್ದೇ ರೋಚಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts