More

    ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಹಾನಿ ಪ್ರಕರಣ: 8 ಆರೋಪಿಗಳ ಬಂಧನ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 8 ಮಂದಿ ಆರೋಪಿಗಳನ್ನು ಇಂದು (ಮಾ.31) ಬಂಧಿಸಿದ್ದಾರೆ.

    ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿ ಆರು ಪೊಲೀಸ್​ ತಂಡಗಳು ನಿರತವಾಗಿವೆ. ಕೆಲ ದುಷ್ಕರ್ಮಿಗಳು ನಿನ್ನೆ (ಮಾ.30) ಸಿಎಂ ಕೇಜ್ರಿವಾಲ್​ ಮನೆ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾ ಒಡೆದಿದ್ದು, ಸಿಎಂ ಮನೆ ಸುತ್ತಲಿನ ಭದ್ರತಾ ತಡೆಗೋಡೆ ಮುರಿದಿರುವ ಹೋಗಿರುವ ಬಗ್ಗೆ ವರದಿಯಾಗಿದೆ.

    ದೆಹಲಿ ವಿಧಾನಸಭೆಯಲ್ಲಿ ಮಾತನಾಡುವಾಗ ಕೇಜ್ರಿವಾಲ್​ ಅವರು ಬಿಜೆಪಿ ಪ್ರಚಾರ ಮಾಡುತ್ತಿರುವ ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಕೇಜ್ರಿವಾಲ್​ ಮನೆಯ ಮೇಲೆ ಬಿಜೆಪಿ ಬೆಂಬಲಿಗರು ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.

    ಕೇಜ್ರಿವಾಲ್​ ಜೀವಕ್ಕೆ ಅಪಾಯವಿದೆ
    ಸಿಎಂ ಕೇಜ್ರಿವಾಲ್​ ಮನೆಯ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಆಮ್​ ಆದ್ಮಿ ಪಕ್ಷದ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ, ಅರವಿಂದ್​ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ ಎಂದು ಆರೋಪ ಮಾಡಿದ್ದಾರೆ.

    ಕೇಜ್ರಿವಾಲ್ ಕ್ಷಮೆಗೆ ಬಿಜೆಪಿ ಆಗ್ರಹ
    ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಸುಳ್ಳು ಎಂದು ಹೇಳಿದ ಕೇಜ್ರಿವಾಲ್ ಅವರ ಹೇಳಿಕೆ ಖಂಡಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಕಾರ್ಯಕರ್ತರ ಗುಂಪೊಂದು ಕೇಜ್ರಿವಾಲ್ ಅವರ ನಿವಾಸದ ಮುಂದೆ ಬುಧವಾರ ಪ್ರತಿಭಟನೆ ನಡೆಸಿ, ಕೇಜ್ರಿವಾಲ್​ ಮನೆಯನ್ನು ಹಾನಿ ಮಾಡಿದರು.

    ಕಚ್ಚಾ ಬಾದಾಮ್​ ಹಾಡಿಗೆ ಸೊಂಟ ಬಳುಕಿಸಿದ ಶಾಸಕಿ ರೋಜಾ: ವಿಡಿಯೋ ವೈರಲ್​!

    ನನ್ನ ಸಾವು ನನ್ನ ಮುಗ್ಧತೆಯನ್ನು ನಿರೂಪಿಸುತ್ತದೆ: ಆತ್ಮಹತ್ಯೆ ಮಾಡ್ಕೊಂಡ ವೈದ್ಯೆಯ ನೋವಿನ ಮಾತು

    ಏರುತ್ತಲೇ ಇದೆ ಇಂಧನ ದರ, ಜನ ಸಾಮಾನ್ಯರ ಬದುಕು ಭಾರ: ಇಂದಿನ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts