More

    ಬರವಿದ್ದಾಗ ಊಟಿಯಲ್ಲಿ ಔಟಿಂಗ್, ಅಕಾಲಿಕ ಮಳೆ ಆದಾಗ ಡಿನ್ನರ್ ಮೀಟಿಂಗ್: ಆರ್​. ಅಶೋಕ ವ್ಯಂಗ್ಯ

    ಬೆಂಗಳೂರು: “ಮೈಸೂರು, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಚಿಕ್ಕಮಗಳೂರು, ಧಾರವಾಡ, ವಿಜಯಪುರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಅಪಾರ ಬೆಳೆ, ಆಸ್ತಿ-ಪಾಸ್ತಿ ಹಾನಿಯಾಗಿ ರೈತರು, ಸಾರ್ವಜನಿಕರು ಕಂಗಾಲಾಗಿದ್ದಾರೆ. ಆದರೆ ಒಂದೆರಡು ಜಿಲ್ಲೆಗಳಲ್ಲಿ ಬಿಟ್ಟರೆ ಬೇರೆ ಯಾವ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಈವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಗೋಜಿಗೇ ಹೋಗಿಲ್ಲ” ಎಂದು ವಿಪಕ್ಷ ನಾಯಕ ಆರ್​. ಅಶೋಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ಇನ್ನರ್​ವ್ಹೀಲ್​ ಕ್ಲಬ್​ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಿವಿಧ ವಸ್ತುಗಳ ವಿತರಣೆ

    “ಈ ದರಿದ್ರ ಕಾಂಗ್ರೆಸ್​ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸಿಯುತ್ತಿದ್ದಾರೆ. ಇವರಿಬ್ಬರ ನಡುವೆ ಆತಂತ್ರವಾಗಿರುವ ಮಂತ್ರಿಗಳು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ” ಎಂದರು.

    “ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಜನರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ. ಒಟ್ಟಿನಲ್ಲಿ ಈ ಅಧಿಕಾರದಾಹಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ” ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಎಕ್ಸ್ (ಈ ಹಿಂದಿನ ಟ್ವಿಟರ್​)​ ಖಾತೆಯಲ್ಲಿ ಬರೆದು ವ್ಯಂಗ್ಯವಾಡಿದ್ದಾರೆ.

    ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

    ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts