ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಬಗ್ಗೆ ಇಂದಿನ ವಿಜಯವಾಣಿ ದಿನಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿದೆ. ಇದನ್ನು ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ (R Ashok), ರಾಜ್ಯಾದ್ಯಂತ ಸಾವಿರಾರು ಬಡ ಕುಟುಂಬಗಳು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಮನೆ-ಮಠ ತೊರೆದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿ ಆಗುತ್ತಿದ್ದು, ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬಗಳ ನೆರವಿಗೆ ಬಾರದೆ, ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಪತ್ನಿ, ಮಗನನ್ನು ಹತ್ಯೆಗೈದ ಪತಿ! ತಾನು ಸಾವಿನಿಂದ ಪಾರು | Harassment
“ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್ಬಿಐ ನಿಯಮ ಮೀರಿ ಸಾಲಗಳಿಗೆ ವಾರ್ಷಿಕ ಶೇ.25ರಷ್ಟು ಬಡ್ಡಿ ವಿಧಿಸುತ್ತಿದ್ದು, ಸಾಲ ಪಡೆದವರನ್ನು ಹೆದರಿಸಿ, ಬೆದರಿಸಿ, ಕಿರುಕುಳ ಕೊಟ್ಟು ಅವರು ಆತ್ಮಹತ್ಯೆಗೆ ಶರಣಾಗುವಂತೆ ಅಥವಾ ಊರು ಮನೆ ಬಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿವೆ. ಇತ್ತೀಚಿನ ದಿನಗಳಲ್ಲಿ ಅನೇಕ ಕುಟುಂಬಗಳ ಮನೆ ಜಪ್ತಿ ಮಾಡುವ ಘಟನೆಗಳು ಸಹ ನಡೆದಿದ್ದು. ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಸಾಲದ ಸುಳಿಯಲ್ಲಿ ಸಿಲುಕಿ ಕಿರುಕುಳ ಅನುಭವಿಸುತ್ತಿರುವವರು ಪಾಡು ಕೇಳುವವರೇ ಇಲ್ಲದಂತಾಗಿದೆ” ಎಂದು ಹೇಳಿದರು.
“ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದುಕೊಳ್ಳುತ್ತಿರುವವರು ಬಹುತೇಕರು ಬಡವರು, ದಿನಗೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಕೃಷಿ ಕಾರ್ಮಿಕರು, ಸಣ್ಣ ರೈತರೇ ಆಗಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಗೃಹ ಇಲಾಖೆ, ಹಣಕಾಸು ಇಲಾಖೆ ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಒಂದು ಜಂಟಿ ಸಮಿತಿ ರಚಿಸಿ ಆ ಮೂಲಕ ಈ ಅಮಾಯಕ ಬಡ ಕುಟುಂಬಗಳನ್ನು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ರಕ್ಷಿಸುವ ಮಾರ್ಗೋಪಾಯ ಕಂಡುಕೊಳ್ಳಬೇಕು ಮತ್ತು ಕೇಂದ್ರ ಹಣಕಾಸು ಇಲಾಖೆ ಹಾಗೂ ಆರ್ಬಿಐ ಜತೆ ಚರ್ಚಿಸಿ ಮೈಕ್ರೋ ಫೈನಾನ್ಸ್ ಕಂಪನಿಗಳ ದಬ್ಬಾಳಿಕೆ ನಿಯಂತ್ರಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು” ಎಂದು ಸಿಎಂಗೆ ಒತ್ತಾಯಿಸಿದ್ದಾರೆ.
ಸ್ಟಾರ್ ನಟಿಯರಿಗೆ ಡಬ್ ಮಾಡೋದು ಯುವತಿ ಅಲ್ಲ ಯುವಕ! ಸೌತ್ ಬ್ಯೂಟಿಗಳ ಧ್ವನಿ ಹಿಂದಿದೆ ಈತನ ಜಾದು | Dubbing Artist