ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಸತ್ಯಹರಿಶ್ಚಂದ್ರರಾಗಿದ್ದರೆ ತನಿಖೆಯ ಭಯವೇಕೆ ಎಂದ ಆರ್​. ಅಶೋಕ್​

DKS R Ashok
Published on

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ವಿಪಕ್ಷ ನಾಯಕ ಆರ್. ಅಶೋಕ್​ ಮತ್ತೊಮ್ಮೆ ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್​ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್​ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ಖಂಡಿಸಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net