More

    ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ; ಕೊನೆಗೂ ಆಯ್ತು ಮಹತ್ವದ ನಿರ್ಧಾರ

    ಬೆಂಗಳೂರು: ಕಳೆದ ಕೆಲವು ಕಾಲದಿಂದ ನನೆಗುದಿಗೆ ಬಿದಿದ್ದ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಇಂದು ಬಿಜೆಪಿ ಅಧಿಕೃತವಾಗಿ ತೆರೆ ಎಳೆದಿದ್ದು, ಆರ್. ಅಶೋಕ ಅವರನ್ನು ವಿಪಕ್ಷ ನಾಯಕರನ್ನಾಗಿ ಆರಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿನ ಮಹತ್ವದ ಬೆಳವಣಿಗೆಯೊಂದು ಇಂದು ನಡೆದಿದೆ. ಈ ಕುರಿತು ಮಾಜಿ ಸಚಿವ ಗೋಪಾಲಯ್ಯ ಅವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

    ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆ ಎರಡೂ ವಿಚಾರವಾಗಿ ರಾಜ್ಯ ಬಿಜೆಪಿ ಕಳೆದ ಕೆಲವು ದಿನಗಳಿಂದ ತೀವ್ರ ವಾಗ್ದಾಳಿ ಎದುರಿಸಿದ್ದು, ಇತ್ತೀಚೆಗಷ್ಟೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದ ಬೆನ್ನಿಗೇ ಇದೀಗ ವಿಪಕ್ಷ ನಾಯಕರ ಆಯ್ಕೆಯನ್ನೂ ಮಾಡುವ ಮೂಲಕ ವಿರೋಧಪಕ್ಷಗಳ ಬಾಯಿಯನ್ನು ಒಂದು ಹಂತಕ್ಕೆ ಮುಚ್ಚಿಸಿದೆ.

    ಇದನ್ನೂ ಓದಿ: ಬಿಜೆಪಿಯಲ್ಲಿ ಉದ್ಭವಿಸಿತಾ ಭಿನ್ನಮತ?: ಕುತೂಹಲ ಕೆರಳಿಸಿದೆ ವಿಪಕ್ಷ ನಾಯಕನ ಆಯ್ಕೆ ವಿಚಾರ

    ಬಿಜೆಪಿ ವಿರೋಧಪಕ್ಷದ ನಾಯಕರ ಆಯ್ಕೆ ಸಲುವಾಗಿ ಕೇಂದ್ರದಿಂದ ವೀಕ್ಷಕರಾಗಿ ಬಂದಿದ್ದ ನಿರ್ಮಲಾ ಸೀತಾರಾಮನ್​ ಉಪಸ್ಥಿತಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆದಿದ್ದು, ಈ ಸಭೆಯಲ್ಲಿ ವಿಪಕ್ಷ ನಾಯಕರ ಆಯ್ಕೆ ಕುರಿತು ನಿರ್ಧಾರ ತಳೆಯಲಾಗಿದೆ.

    ಇದನ್ನೂ ಓದಿ: ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?

    ಮತ್ತೊಂದೆಡೆ ವಿಪಕ್ಷ ನಾಯಕರ ಆಯ್ಕೆ ಕುರಿತ ಸಭೆಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಹೊರಗೆ ಹೋಗಿದ್ದಾರೆ. ಯಾರು ವಿಪಕ್ಷ ನಾಯಕ ಆಗಲಿದ್ದಾರೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅವರು ಅಸಮಾನಧಾನಗೊಂಡು ಸಭೆಯಿಂದ ಹೊರನಡೆದಿದ್ದಾರೆ ಎನ್ನಲಾಗಿದ್ದು, ಬಿಜೆಪಿಯಲ್ಲಿ ವಿಪಕ್ಷ ನಾಯಕರ ವಿಚಾರವಗಿ ಭಿನ್ನಮತ ಉಂಟಾಗಿದೆ ಎಂದೂ ಹೇಳಲಾಗುತ್ತಿದೆ.

    ವಿಶ್ವಕಪ್ ಕ್ರಿಕೆಟ್ ಫೈನಲ್​ನ ಲಾಭ ಪಡೆಯಲು ಮುಂದಾದ ಪಾಲಿಕೆ; ಕೈಗೊಂಡ ಕ್ರಮ ಏನು?

    ಶಮಿಗೆ ಏಳು ವಿಕೆಟ್: ಏನಿದು ಅಚ್ಚರಿ.. ಆತನೊಬ್ಬ ನಿನ್ನೆ ಕಂಡ ಕನಸು ಇಂದು ನಿಜವಾಯ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts