More

    ಬಾಂಬ್​ ಬ್ಲಾಸ್ಟ್​ ಪ್ರಕರಣದ ಆರೋಪಿಗಳ ರಕ್ಷಣೆಗೆ ಕಾಂಗ್ರೆಸ್​ ಸರ್ಕಾರ ಮುಂದಾಗಿತ್ತು: ಆರ್. ಆಶೋಕ್

    ಬೆಂಗಳೂರು: ನಗರದ ಕುಂದಲಹಳ್ಳಿ ಅಲ್ಲಿರುವ ರಾಮೇಶ್ವರಂ ಕೆಪೆ ಬಾಂಬ್​ ಬ್ಲಾಸ್ಟ್​ಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಪ್ರಕರಣದ ಪ್ರಮುಖ ಆರೋಪಿಗಳನ್ನು ರಕ್ಷಿಸಲು ಮುಂದಾಗಿತ್ತು ಎಂದು ವಿಪಕ್ಷ ನಾಯಕ ಆರ್​.ಅಶೋಕ್​ ಆರೋಪಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಶೋಕ್​, ರಾಷ್ಟ್ರೀಯ ತನಿಖಾ ದಳ (NIA) ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪರಿಣಾಮವಾಗಿ ಆರೋಪಿಗಳ ಬಂಧನ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

    ಬಾಂಬ್​ ಸ್ಫೋಟದ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಇದು ವ್ಯಾಪಾರದ ವ್ಯಾಜ್ಯದಿಂದ ಮಾಡಲಾಗಿರುವ ಬ್ಲಾಸ್ಟ್​ ಎಂದು ಹೇಳುವ ಮೂಲಕ ಮೊದಲಿಗೆ ತನಿಖೆಯ ದಿಕ್ಕನ್ನು ತಪ್ಪಿಸಲು ಯತ್ನಿಸಿದರು. ಶಿವಕುಮಾರ್​ ಅವರು ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಅದೇ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದರು ಹೀಗಾಗಿ ಆರೋಪಿಗಳ ಬಂಧನ ಸಾಧ್ಯವಾಗಿರಲಿಲ್ಲ.

    ಇದನ್ನೂ ಓದಿ: ಹಳ್ಳಿ ಮೇಷ್ಟ್ರು ಚಿತ್ರದ ಪರಿಮಳ ಈಗ ಹೇಗಿದ್ದಾರೆ ನೋಡಿ

    ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್​ ಸರ್ಕಾರ ಆರೋಪಿಗಳ ಬಂಧನಕ್ಕೆ ಮುಂದಾಗಿರಲಿಲ್ಲ. ರಾಷ್ಟ್ರೀಯ ತನಿಖಾ ದಳ (NIA) ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪರಿಣಾಮವಾಗಿ ಆರೋಪಿಗಳ ಬಂಧನ ಸಾಧ್ಯವಾಗಿದೆ. ರಾಜ್ಯದಲ್ಲಿ ಮತ್ತಷ್ಟು ವಿದ್ವಂಸಕ ಕೃತ್ಯಗಳನ್ನು ತಡೆಯುವಲ್ಲಿ ಕಾರಣವಾದ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಅಭಿನಂದನೆಯನ್ನು ಸಲ್ಲಿಸುತ್ತೇನೆ.

    ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ದೇಶವಿರೋಧಿ ಚಟುವಟಿಕೆಗಳು ಹೆಚ್ಚಾಗಿವೆ. ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ನಡೆಸಿದವರು ನಮ್ಮ ಬ್ರದರ್ಸ್ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ಈಗ ಬೆಂಗಳೂರಿನಲ್ಲಿ ಸ್ಫೋಟ ನಡೆಸಿದವರು ಕಾಂಗ್ರೆಸ್ ಪಕ್ಷದವರ ಸಿಸ್ಟರ್ ಮಮತಾ ಬ್ಯಾನರ್ಜಿ ಅವರ ರಾಜ್ಯದಲ್ಲಿ ಸಿಕ್ಕಿದ್ದಾರೆ. ಭಯೋತ್ಪಾದಕರು ಕಾಂಗ್ರೆಸ್ ಮತ್ತು ಅದರ‌ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಸುರಕ್ಷಿತ ಎಂದು ಭಾವಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts