More

    ಬಳ್ಳಾರಿಯಲ್ಲಿ ಭಾರತ್​ ಜೋಡೋ ಯಾತ್ರೆ ವೇಳೆ ವಿದ್ಯುತ್​ ಅವಘಡ: ಐವರಿಗೆ ಗಾಯ, ಪರಿಹಾರ ಘೋಷಿಸಿದ ರಾಹುಲ್

    ಬಳ್ಳಾರಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಐದು ಮಂದಿಗೆ ಗಾಯಗಳಾಗಿದ್ದು, ಅವರನ್ನು ಮೋಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

    ರಾಹುಲ್ ಗಾಂಧಿ ಸನಿಹದಲ್ಲೇ ವಿದ್ಯುತ್ ಅವಘಡ ಸಂಭವಿಸಿದೆ. ಮೋಕಾ ಗ್ರಾಮದ ಡೊಡ್ಡ ಮೋರಿ ಬಳಿ ಈ ಘಟನೆ ನಡೆಯಿತು. ಯಾತ್ರಿಯೊಬ್ಬರು ತಮ್ಮ ಕೈಯಲ್ಲಿ ಐರನ್ ರಾಡ್ ಹೊಂದಿದ್ದ ಕಾಂಗ್ರೆಸ್ ಧ್ವಜವನ್ನು ಹಿಡಿದಿದ್ದರು. ಅದು ವಿದ್ಯುತ್ ತಂತಿಗೆ ತಗುಲಿದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ.

    ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ದೊಡ್ಡಪ್ಪ ಹಾಗೂ ಸಂತೋಷ್ ಸೇರಿದಂತೆ ಐದು ಜನರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಗಾಯಗೊಂಡವರನೆಲ್ಲ ಹೊಸ ಮೋಕಾ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಣ್ಣ ಸುಟ್ಟಗಾಯಗಳಾಗಿದ್ದು, ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ರಾಹುಲ್ ಗಾಂಧಿ ಅವರು ಗಾಯಾಳುಗಳಿಗೆ ತಲಾ ಒಂದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಗೊಂಡವರನ್ನೆಲ್ಲ ಶಾಸಕ ನಾಗೇಂದ್ರ ಅವರು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು, ಸ್ಥಳದಲ್ಲೇ ಹಾಜರಿದ್ದು ಆರೋಗ್ಯ ವಿಚಾರಿಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

    ಕೇರಳ ನರಬಲಿ ಪ್ರಕರಣ: ಆರೋಪಿಗಳು ಶವದ ಮಾಂಸ ತಿಂದಿದ್ದಾರೆ ಎನ್ನುವುದಕ್ಕೆ ಪೊಲೀಸರಿಗೆ ಸಿಕ್ತು ಮಹತ್ವದ ಸಾಕ್ಷಿ

    ಸಂತಾನಹರಣ ಚಿಕಿತ್ಸೆ ನಡೆದ ಕೆಲವು ಗಂಟೆಗಳ ಬಳಿಕ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

    VIDEO| ಕಾಲಿಂದ ಒದ್ದು, ಬಾಲವನ್ನು ತಿರುಚಿ ಕ್ರೂರವಾಗಿ ನಡೆದುಕೊಂಡ ವ್ಯಕ್ತಿಗೆ ಸರಿಯಾಗಿ ಬುದ್ಧಿ ಕಲಿಸಿದ ಹಸು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts