More

    ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯಕ್ಕೆ ಬೇಡಿಕೆ: ಸಚಿವ ಬಿ.ಸಿ.ನಾಗೇಶ್ ಹೇಳಿಕೆ

    ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯವನ್ನು ಮದರಸಾಗಳಲ್ಲಿ ಅಳವಡಿಸಲು ಪೋಷಕರು ಮನವಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

    ವಿಧಾನಸೌಧದದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮದರಸಾಗಳಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ. ಆದರೆ ಪೋಷಕರು ಮದರಸಾ ಶಿಕ್ಷಣದಿಂದ ನಮ್ಮ ಮಕ್ಕಳು ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಆಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕಷ್ಟ ಆಗುತ್ತಿದೆ. ವೃತ್ತಿಪರ ಕೋರ್ಸ್ ಪಡೆದುಕೊಳ್ಳುವುದು ಕಷ್ಟ. ಬೇರೆ ಮಕ್ಕಳಿಗೆ ‌ಕೊಟ್ಟ ಹಾಗೆ ಶಿಕ್ಷಣ ಕೊಡಿ ಎಂಬ ಮನವಿ ಮಾಡಿದ್ದಾರೆ ಎಂದರು‌.

    ಆದರೆ ಮದರಸಾ ಕಡೆಯಿಂದ ಹಾಗೂ ಅಲ್ಪಸಂಖ್ಯಾತ ಇಲಾಖೆಯಿಂದ ಯಾವುದೇ ಮನವಿ ಬಂದಿಲ್ಲ. ಪೋಷಕರೇನೂ ಅಧಿಕೃತವಾಗಿ ಮನವಿ ಮಾಡಿಲ್ಲ ಎಂದು ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.

    ವಧುವಿನಂತೆ ರೇಷ್ಮೆ ಸೀರೆ, ಚಿನ್ನಾಭರಣ ತೊಟ್ಟು ಮದುವೆಯಾದ ವರ: ಕಾರಣ ಕೇಳಿದ್ರೆ ಬೆರಗಾಗ್ತೀರಾ!

    ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರ್ಸ್ ನೇಮಕ: ಶೀಘ್ರವೇ ಅರ್ಜಿ ಸಲ್ಲಿಸಿ

    ನಿರ್ಮಾಣ್-2 ಅಡ್ಡಿ ದೂರವಾಗುವ ನಿರೀಕ್ಷೆ: 15 ಮೀ. ಎತ್ತರದವರೆಗೆ ಕಟ್ಟಡ ನಿರ್ವಿುಸಲು ರಾಜ್ಯ ಸರ್ಕಾರದ ಅನುಮತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts