ಹೈದರಾಬಾದ್: ಶಾನು ಅಲಿಯಾಸ್ ಷಣ್ಮುಖ ಜಸ್ವಂತ್ ಹಾಗೂ ದೀಪ್ತಿ ಸುನೈನಾ ತೆಲುಗು ಯೂಟ್ಯೂಬ್ ಸರ್ಕಲ್ನಲ್ಲಿ ಫೇಮಸ್ ಆಗಿರುವ ಮುದ್ದಾದ ಜೋಡಿಗಳು. ದೀಪ್ತಿ ಬಿಗ್ಬಾಸ್ನಲ್ಲಿ ಭಾಗವಹಿಸುವ ಮೂಲಕ ಖ್ಯಾತಿ ಗಳಿಸಿದ್ದಲ್ಲದೆ, ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಶಾನು ಮತ್ತು ದೀಪ್ತಿ ಪರಸ್ಪರ ಪ್ರೀತಿ ಮಡುತ್ತಿದ್ದರು. ಈ ವಿಚಾರ ಜಗಜ್ಜಾಹೀರಾಗಿತ್ತು. ಸ್ವತಃ ಇಬ್ಬರು ಕೂಡ ಹೇಳಿಕೊಂಡಿದ್ದರು. ಆದರೆ, ಬಿಗ್ಬಾಸ್ ಸೀಸನ್ 5 ಇಬ್ಬರ ಪ್ರೀತಿಗೆ ಹುಳಿ ಹಿಂಡಿದ್ದು, ದೀಪ್ತಿ ತಮ್ಮ ಪ್ರೀತಿಗೆ ಅಧಿಕೃತವಾಗಿ ಬ್ರೇಕಪ್ ಹೇಳಿರುವುದು ಈಗಾಗಲೇ ಎಲ್ಲರಿಗೂ ತಿಳಿದಿದೆ.
ದೀಪ್ತಿ ಸದ್ಯ ತಮ್ಮ ಸಿನಿಮಾ ಕಡೆ ಹೆಚ್ಚು ಗಮನ ಹರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ದೀಪ್ತಿ, ಆಗಾಗ ಹಾಟ್ ಫೋಟೋಗಳನ್ನು ಹರಿಬಿಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಅಲ್ಲದೆ, ಟ್ರೋಲ್ ಕೂಡ ಆಗುತ್ತಿರುತ್ತಾರೆ. ಇತ್ತೀಚೆಗೆ ಚೆನ್ನೈನ ಬೆಸಂತ್ ನಗರದಲ್ಲಿರುವ ಅರುಪದೈ ವೀಡು ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿರುವ ದೀಪ್ತಿ, ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂ ಪೇಜ್ನಲ್ಲಿ ಪೋಸ್ಟ್ ಮಾಡಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕುಂಕುಮ ಕೇಸರಿ ಬಣ್ಣದ ಸೀರೆ ಉಟ್ಟು ದೇವಸ್ಥಾನದಲ್ಲಿ ಕುಳಿತ ವಿವಿಧ ಭಂಗಿಯಲ್ಲಿ ಕ್ಯಾಮೆರಾಗೆ ಫೋಸ್ ನೀಡಿರುವ ಫೋಟೋಗಳನ್ನು ದೀಪ್ತಿ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಯಾವುದರ ಬಗ್ಗೆಯೂ ಚಿಂತಿಸದೇ ಇರಲು ಇರುವ ಏಕೈಕ ಮಾರ್ಗವೆಂದರೆ ಎಲ್ಲದರ ಬಗ್ಗೆ ಪ್ರಾರ್ಥಿಸುವುದು ಎಂದು ಅಡಿ ಬರಹ ಬರೆದುಕೊಂಡಿದ್ದಾರೆ. ಇದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದೆ. ಎಲ್ಲ ಓಕೆ, ಇದು ದೇವಸ್ಥಾನದಲ್ಲಿ ಅವಶ್ಯಕತೆ ಇತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನದಲ್ಲಿ ನಿಮ್ಮ ಬ್ಯೂಟಿ ಪ್ರದರ್ಶನ ಮಾಡಬೇಕಿತ್ತಾ ಎಂದು ಟೀಕಿಸಿದ್ದಾರೆ.
ಇನ್ನು ಕೆಲವರು ದೀಪ್ತಿ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ಫೋಟೋಗಳು ಸಖತ್ತಾಗಿವೆ. ನೀವು ನೋಡಲು ತುಂಬಾ ಸುಂದರವಾಗಿ ಕಾಣುತ್ತಿದ್ದೀರಾ ದೀಪ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)