ಶಾಸಕ ಜಮೀರ್​ಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: 5 ಕಡೆಗಳಲ್ಲಿ 40ಕ್ಕೂ ಅಧಿಕ ಅಧಿಕಾರಿಗಳ ತಂಡದಿಂದ ದಾಳಿ

Zameer
Published on

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್ ಖಾನ್​​ ಅವರಿಗೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಶಾಕ್​ ನೀಡಿದ್ದಾರೆ.

ಇಂದು (ಜುಲೈ 5) ಬೆಳಗ್ಗೆ ಜಮೀರ್ ಅವರ ಮನೆ ಮೇಲೆ 40ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಜಮೀರ್​ ಅಹ್ಮದ್​ ಅವರಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಎಲ್ಲೆಲ್ಲಿ ದಾಳಿ

1) ಫ್ರೆಜರ್​ ಟೌನ್​ನಲ್ಲಿರುವ ಜಮೀರ್ ಆಹಮದ್ ಮನೆ ಮೇಲೆ ದಾಳಿ

2) ಸಿಲ್ವರ್ ಓಕ್ ಅಪಾರ್ಟ್ಮೆಂಟ್ ಮೇಲೆ ದಾಳಿ

3) ಸದಾಶಿವ ನಗರದ ಗೆಸ್ಟ್ ಹೌಸ್ ಮೇಲೆ ದಾಳಿ

4) ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ ದಾಳಿ

5) ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಮೇಲೆ ದಾಳಿ

ಕಳೆದ ಆಗಸ್ಟ್​ನಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿ ಮತ್ತು ಫ್ಲ್ಯಾಟ್‌ ಮೇಲೆ ದಾಳಿ ಮಾಡಿದ್ದರು. ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಖಾನ್​ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅನಾಮಧೇಯ ಮೂಲಗಳಿಂದ ಮಾಹಿತಿ ಸಂಗ್ರಹ ಮಾಡಿತ್ತು. ಜಮೀರ್​​ ಕಳೆದ ಹಣಕಾಸು ವರ್ಷದಲ್ಲಿ ಘೋಷಿಸಿಕೊಂಡ ಆಸ್ತಿಗಿಂತ ದುಪ್ಪಟ್ಟು ಆಸ್ತಿ ಹೊಂದಿರುವ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿತ್ತು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net