ಸಿಎಂ ಬಸವರಾಜ ಬೊಮ್ಮಾಯಿಗೆ ಕರೊನಾ ಪಾಸಿಟಿವ್​: ಕೊನೇ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು

bommai
Published on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಸಿಎಂ ಬೊಮ್ಮಾಯಿ, ನನಗೆ ಇಂದು ಕೋವಿಡ್​-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ.

ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಬೇಕಾಗಿತ್ತು. ಸಿಎಂ ದೆಹಲಿ ಪ್ರವಾಸಕ್ಕೆ ಎಲ್ಲವು ಸಿದ್ಧವಾಗಿತ್ತು. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಇಂದು ಬೊಮ್ಮಾಯಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ನೀತಿ ಆಯೋಗದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಕರೊನಾ ಪಾಸಿಟಿವ್​ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.

ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಲು 48 ಗಂಟೆ ಮುಂಚಿತವಾಗಿಯೇ ಸಿಎಂ ಕೊವೀಡ್ ಪರೀಕ್ಷೆ ಮಾಡಿಸಬೇಕಿತ್ತು. ಹೀಗಾಗಿ ನಿನ್ನೆ ಸಂಜೆ ಕೊವೀಡ್ ಟೆಸ್ಟ್ ಮಾಡಿಸಿದ್ದರು. ಇಂದು ಬೆಳಗ್ಗೆ ಕೊವೀಡ್ ಪಾಸಿಟಿವ್​ ರಿಪೋರ್ಟ್ ಬಂದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ಅವರಿಗೆ ಮೂರನೇ ಬಾರಿಗೆ ಕರೊನಾ ಪಾಸಿಟಿವ್ ಆಗಿದೆ. ಸದ್ಯ ಅವರ ಆರೋಗ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ತಮ್ಮ ‌ಮನೆಯಲ್ಲೇ ಬೊಮ್ಮಾಯಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net