More

    ಸರ್ವೋದಯ ದಿನ: ಜ.30ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ

    ಬೆಂಗಳೂರು: ನಾಳೆ (ಜ.30) ಸರ್ವೋದಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಷೇಧಿಸಿದೆ.

    ನಾಳೆ ಭಾನುವಾರ ಆಗಿರುವುದರಿಂದ ನಗರದಲ್ಲಿ ಬಹುತೇಕ ಮಾಂಸದಂಗಡಿಗಳು ತುಂಬಿ ತುಳುಕುತ್ತಿರುತ್ತವೆ. ಬಿಬಿಎಂಪಿ ಆದೇಶ ಮಾಂಸಪ್ರಿಯರಿಗೆ ಶಾಕ್​ ಆದರೂ, ಹಿಂದಿನಿಂದಲೂ ಸರ್ವೋದಯ ದಿನದಂದು ಇದು ನಡೆದುಕೊಂಡು ಬರುತ್ತಿರುವುದರಿಂದ ಎಲ್ಲರೂ ಬಿಬಿಎಂಪಿ ಆದೇಶವನ್ನು ಪಾಲಿಸಲೇಬೇಕಿದೆ. ಆದೇಶವನ್ನು ಮೀರಿ ಮಾಂಸ ಮಾರಾಟ ಮಾಡಿದರೆ ಸೂಕ್ತ ಕ್ರಮವನ್ನು ಬಿಬಿಎಂಪಿ ತೆಗೆದುಕೊಳ್ಳಲಿದೆ.

    ಜನವರಿ 30 ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನ. ಇದನ್ನು ಹುತಾತ್ಮರ ದಿನವಾಗಿಯೂ ಆಚರಿಸಲಾಗುತ್ತದೆ. ಗಾಂಧಿ ಅವರು ಅಹಿಂಸೆಯ ಪ್ರತಿರೂಪ ಆಗಿರುವುದರಿಂದ ಅವರ ಪುಣ್ಯ ಸ್ಮರಣೆಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಕಡಿವಾಣ ಹಾಕಲಾಗುತ್ತದೆ. ಈ ದಿನದಂದು ದೇಶಕ್ಕಾಗಿ ತ್ಯಾಗ ಮಾಡಿದ ಹುತಾತ್ಮರನ್ನು ಸ್ಮರಿಸಲಾಗುತ್ತದೆ.

    ಸರ್ವೋದಯ ದಿನ: ಜ.30ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ

    ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

    ರಾಜ್ಯದ 4.53 ಲಕ್ಷ ರೈತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ; ರೈತ ವಿದ್ಯಾನಿಧಿ ಯೋಜನೆಯಲ್ಲಿ ಬೆಳಗಾವಿ ಪ್ರಥಮ 

    ಬಿಜೆಪಿ ದೇಶದ ಶ್ರೀಮಂತ ಪಕ್ಷ; ಒಟ್ಟು ಆಸ್ತಿ 4, 847 ಕೋಟಿ ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts