More

    ಬೆಂಗ್ಳೂರಲ್ಲಿ ದಿನದ 24 ಗಂಟೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಪೊಲೀಸ್​ ಇಲಾಖೆ ಒಪ್ಪಿಗೆ​: ಸರ್ಕಾರಕ್ಕೆ ವರದಿ ಸಲ್ಲಿಕೆ

    ಬೆಂಗಳೂರು: ಶೀಘ್ರದಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವೆಡೆ ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳು ದಿನವಿಡಿ ಕಾರ್ಯ ನಿರ್ವಹಿಸಲಿವೆ. ಹೋಟೆಲ್​ ಮಾಲೀಕರು ಸಲ್ಲಿಸಿರುವ ಪ್ರಸ್ತಾಪಕ್ಕೆ ಓಕೆ ಎಂದಿರುವ ಪೊಲೀಸ್​ ಇಲಾಖೆ ಸರ್ಕಾರಕ್ಕೆ ಕೆಲವೊಂದಿಷ್ಟು ಸಲಹೆಗಳನ್ನು ನೀಡಿದೆ.

    ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ದಿನದ 24 ಗಂಟೆಯೂ ತೆರೆಯಲು ಬೆಂಗಳೂರು ಪೊಲೀಸರಿಂದ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ, ನಿರ್ದಿಷ್ಟ ಪ್ರದೇಶಗಳಲ್ಲಿ ಮಾತ್ರ ರಾತ್ರಿ ಪೂರ್ತಿ ಹೋಟೆಲ್ ಮತ್ತು ರೆಸ್ಟೋರೆಂಟ್ ತೆರೆಯಲು ಪೊಲೀಸರು ಅನುಮತಿಸಿದ್ದಾರೆ.

    ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳು ಹಾಗೂ ರೈಲು ನಿಲ್ದಾಣಗಳಲ್ಲಿ 24 ಗಂಟೆ ಹೋಟೆಲ್ ತೆರೆಯಲು ಪೊಲೀಸ್​ ಇಲಾಖೆ ಒಪ್ಪಿಗೆ ನೀಡಿದೆ. ಈ ಕುರಿತು ಈ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.

    ಈ ಮೇಲಿನ ಜಾಗಗಳನ್ನು ಹೊರತುಪಡಿಸಿ ಬೇರೆ ಜಾಗಗಳಲ್ಲಿ ರಾತ್ರಿ ಹೋಟೆಲ್ ತೆರೆಯಲು ಅನುಮತಿ ಕೊಟ್ಟರೆ ಉದ್ಭವಿಸುವ ಸಮಸ್ಯೆಗಳ ಬಗ್ಗೆ ಪೊಲೀಸ್​ ಇಲಾಖೆ, ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದೆ.

    ಈ ಹಿಂದೆ ಇಡೀ ರಾತ್ರಿ ಹೋಟೆಲ್ ಮತ್ತು ರೆಸ್ಟೋರೆಂಟ್ ತೆರೆಯಲು ಅನುಮತಿ ಕೋರಿ ಹೋಟೆಲ್​ ಮಾಲೀಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. (ದಿಗ್ವಿಜಯ ನ್ಯೂಸ್​)

    ಹಲ್ಲು ಉಜ್ಜದೇ ಮುತ್ತಿಡಬೇಡ ಎಂದ ಪತ್ನಿ: ಕೋಪಗೊಂಡ ಗಂಡನಿಂದ ನಡೆಯಿತು ಘನ ಘೋರ ಕೃತ್ಯ

    ನಂಜನಗೂಡಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆ: ಅಂತ್ಯಕ್ರಿಯೆ ಬಳಿಕ ಪ್ರಕರಣಕ್ಕೆ ಸ್ಫೋಟಕ ತಿರುವು

    ಸಿಎಂ ಉದ್ಧವ್​ ಠಾಕ್ರೆ ಸರ್ಕಾರಕ್ಕೆ ನಾಳೆ ನಿರ್ಣಾಯಕ ದಿನ: ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts