

ಬೆಂಗಳೂರು: ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆಗೆ ಟ್ರಾಫಿಕ್ ದಂಡ ಹೆಚ್ಚು ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಎಲ್ಲೆಡೆ ಹಬ್ಬಿಸಲಾಗುತ್ತಿದೆ.
ಈ ಬಗ್ಗೆ ಸ್ಪಷನೆ ನೀಡಿರುವ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಡಾ. ಬಿ.ಆರ್. ರವಿಕಾಂತೇಗೌಡ ಅವರು 2019ರ ಸೆಪ್ಟೆಂಬರ್ ದಂಡ ಪರಿಷ್ಕೃತಗೊಂಡಿದೆ. ಆ ನಂತರ ದಂಡ ಹೆಚ್ಚು ಮಾಡಿಲ್ಲವೆಂದು ಹೇಳಿದ್ದಾರೆ.
ದಂಡ ಹೆಚ್ಚು ಮಾಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಅದಕ್ಕೆಲ್ಲ ಆಸ್ಪದ ಕೊಡಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.