More

    ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

    ಈ ಮಾಹಿತಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್​ ಅವರು ಟ್ವೀಟ್​ ಮೂಲಕ ಖಚಿತಪಡಿಸಿದ್ದಾರೆ.

    ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 10 ಸಾವಿರ ಹುದ್ದೆಗಳ ಭರ್ತಿ ಮತ್ತು ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಕೆಲವೇ ದಿನಗಳಲ್ಲಿ ನೇಮಕ ಪ್ರಕ್ರಿಯೆ ಅಧಿಸೂಚನೆ ಹೊಡರಿಸಲಾಗುವುದು ಎಂದು ಸರ್ಕಾರ ಹೇಳಿದೆ.

    ಇದರೊಂದಿಗೆ ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಪಡೆಯಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಬಿ.ಸಿ. ನಾಗೇಶ್​ ಅವರು ತಿಳಿಸಿದ್ದಾರೆ.

    ಹುತಾತ್ಮ ಸಾಯಿತೇಜ ಸಾಮಾನ್ಯ ಯೋಧರಲ್ಲ: ಮಾಜಿ ಸೇನಾಧಿಕಾರಿ ಹೇಳಿದ್ದನ್ನು ಕೇಳಿದ್ರೆ ಮೈನವಿರೇಳುತ್ತೆ

    ಬೆತ್ತದಿಂದ ಥಳಿಸಿ ಮಹಿಳೆಯನ್ನ ಕೊಂದ ಪೂಜಾರಿ! ಚನ್ನರಾಯಪಟ್ಟಣದಲ್ಲಿ ನಡೆಯಿತು ಘೋರ ಕೃತ್ಯ

    ಜೂಮ್​ ಕಾಲ್​ನಲ್ಲಿ 900 ಉದ್ಯೋಗಿಗಳನ್ನು ಕೆಲ್ಸದಿಂದ ತೆಗೆದ ಸಿಇಒ ಬಗ್ಗೆ ಆನಂದ್​ ಮಹೀಂದ್ರಾ ಹೇಳಿದ್ದು ಹೀಗೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts