ಬಿಜೆಪಿ ನಾಯಕನಿಗೆ ಗುಂಡಿಟ್ಟು ಬರ್ಬರ ಹತ್ಯೆಗೈದು ದುಷ್ಕರ್ಮಿಗಳು ಪರಾರಿ

BJP Leader
Published on

ನವದೆಹಲಿ: ಸ್ಥಳೀಯ ಬಿಜೆಪಿ ನಾಯಕನಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ನಿನ್ನೆ (ಏ.20) ಸಂಜೆ ಪೂರ್ವ ದೆಹಲಿಯಲ್ಲಿ ಘಟನೆ ನಡೆದಿದ್ದು, ಮೃತ ಬಿಜೆಪಿ ನಾಯಕನನ್ನು ಜಿತು ಚೌಧರಿ (42) ಎಂದು ಗುರುತಿಸಲಾಗಿದೆ.

ಮಯೂರ್​ ವಿಹಾರದ ಮೂರನೇ ಹಂತದಲ್ಲಿರುವ ಮನೆಯ ಮುಂದೆ ಬಿಜೆಪಿ ನಾಯಕ ಜಿತು ಚೌಧರಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಜಿತು ಚೌಧರಿ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪರಾಧ ನಡೆದ ಸ್ಥಳದಿಂದ ಕೆಲವು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಪರಾರಿಯಾಗಿದ್ದು, ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net