ನಯನತಾರ ಬಾಡಿಗೆ ತಾಯ್ತನ ಕೇಸ್​ಗೆ ರೋಚಕ ಟ್ವಿಸ್ಟ್​: ಅಧಿಕೃತ ದಾಖಲೆಗಳಿಂದ ಅಸಲಿ ಮದುವೆ ಸಂಗತಿ ಬಯಲು

Nayanatara
Published on

ಚೆನ್ನೈ: ನಟಿ ನಯನತಾರ ಅವರ ಬಾಡಿಗೆ ತಾಯ್ತನ ಪ್ರಕರಣವೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಅವಳಿ ಮಕ್ಕಳನ್ನು ಪಡೆದ ಬಗ್ಗೆ ನಯನತಾರ ಪತಿ ವಿಘ್ನೇಶ್​ ಶಿವನ ಅ. 9ರಂದು ಟ್ವೀಟ್​ ಮಾಡಿದ್ದರು. ಇದರ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿತ್ತು.

ಕಳೆದ ಜೂನ್​ 9ರಂದು ಮದುವೆಯಾದ ತಾರಾಜೋಡಿಗೆ 4 ತಿಂಗಳಲ್ಲಿ ಮಗು ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವವಾಗಿತ್ತು. ಬಳಿಕ ಬಾಡಿಗೆ ತಾಯ್ತನ ಮೂಲಕ ಮಗು ಪಡೆದಿದ್ದಾರೆ ಎಂಬ ಸುದ್ದಿಯಾಗುತ್ತಲೇ, ಬಾಡಿಗೆ ತಾಯ್ತನದ ನಿಯಮಗಳನ್ನು ತಾರಾದಂಪತಿ ಗಾಳಿಗೆ ತೂರಿದ್ದಾರೆ ಎಂಬ ವಿವಾದ ಸೃಷ್ಟಿಯಾಯಿತು.

ವಿವಾದದ ಬೆನ್ನಲ್ಲೇ ದಂಪತಿ ವಿರುದ್ಧ ದೂರು ಸಹ ದಾಖಲಾಗಿಯಿತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ಸರ್ಕಾರ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ತಮಿಳುನಾಡಿನ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯು ತನಿಖೆಯನ್ನು ಆರಂಭಿಸಿದೆ.

ಇದೀಗ ಈ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಮೂಲಗಳ ಪ್ರಕಾರ ನಯನತಾರ ಮತ್ತು ವಿಘ್ನೇಶ್​ ಶಿವನ್​ ಕಾನೂನುಬದ್ಧವಾದ ದಾಖಲೆಗಳನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ದಂಪತಿ ಆರು ವರ್ಷಗಳ ಹಿಂದೆಯೇ ರಿಜಿಸ್ಟ್ರಾರ್​ ಮದುವೆಯಾಗಿದ್ದು, ಇದಕ್ಕೆ ಸಂಬಂಧಿಸಿದ ಕಾನೂನಾತ್ಮಕ ದಾಖಲೆಗಳನ್ನು ಸಲ್ಲಿಸಿದ್ದಾರೆಂದು ಹೇಳಲಾಗಿದೆ.

ಇದಿಷ್ಟೇ ಅಲ್ಲದೆ, 2021ರಲ್ಲೇ ಬಾಡಿಗೆ ತಾಯ್ತನ ಒಪ್ಪಂದಕ್ಕೆ ದಂಪತಿ ಸಹಿ ಹಾಕಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಹ ಸಲ್ಲಿಸಿದ್ದಾರೆ. ಹೀಗಾಗಿ ಇದರಲ್ಲಿ ಯಾವುದೇ ಅಕ್ರಮ ಇಲ್ಲ ಎಂದು ಹೇಳಲಾಗಿಸೆ. ಕಳೆದ ಜೂನ್​ 9ರಂದು ಸಾಂಪ್ರದಾಯಿಕವಾಗಿ ಮದುವೆ ನಡೆದಿದ್ದು, 6 ವರ್ಷಗಳ ಹಿಂದೆಯೇ ಇಬ್ಬರು ರಿಜಿಸ್ಟ್ರಾರ್​ ಮದುವೆ ಆಗಿರುವುದಾಗಿ ದಾಖಲೆಗಳು ಹೇಳುತ್ತಿವೆ. ಇದೀಗ ಬಾಡಿಗೆ ತಾಯ್ತನದ ವಿವಾದ ತಾರ್ಕಿಕ ಅಂತ್ಯ ಕಾಣುವಂ ಹಂತಕ್ಕೆ ಬಂದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net