More

    ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 14 ಮಂದಿ ಸಾವು: ಸಾಕಷ್ಟು ಆಕ್ಸಿಜನ್​ ಇದ್ದರೂ ಮೃತಪಟ್ಟಿದ್ಹೇಗೆ?

    ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಾಗಿ 24 ಮಂದಿ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಕಳೆದ 24 ಗಂಟೆಯಲ್ಲಿ ಮತ್ತೆ 14 ಮಂದಿ ಮೃತಪಟ್ಟಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

    14 ಜನರು ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಅವಶ್ಯಕತೆಗಿಂತ ಹೆಚ್ಚಾಗಿ ಆಕ್ಸಿಜನ್ ಇದೆ. ಕರೊನಾ ಸೋಂಕಿತರು ಅಂತಿಮ ಹಂತದಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದಾರೆ. ಅದರಿಂದಲೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ಗಂಭೀರ ಹಂತದಲ್ಲಿರುವ ರೋಗಿಗಳು ಚಿಕಿತ್ಸೆ ಫಲಿಸದೆ ಸಾವಿಗೀಡಾಗುತ್ತಿದ್ದಾರೆ. ಮೇ 4ರಂದು ಎಂಟು ಮಂದಿ, ಮೇ 5ರಂದು ಎಂಟು ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.

    ಮೇ 3ರಂದು ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಯಿತು. ಸಾಕಷ್ಟು ಟೀಕೆಗಳು ವ್ಯಕ್ತವಾದ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಿಲ್ಲಾಸ್ಪತ್ರೆಗೆ ನಿರಂತರವಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿದೆ.

    ಇಷ್ಟೇ ಅಲ್ಲದೆ, ನಿನ್ನೆಯಿಂದ ಚಾಮರಾಜನಗರದಲ್ಲೇ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ್ದಾರೆಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. (ದಿಗ್ವಿಜಯ ನ್ಯೂಸ್​)

    ಬದಲಾವಣೆ ಆಗಲಿದೆ ಅಮ್ಮಾ ಕ್ಯಾಂಟೀನ್​ ಹೆಸರು: ನೂತನ ಹೆಸರು ಹೀಗಿದೆ ನೋಡಿ…

    ಯಶ್ ಚಿತ್ರಕ್ಕೆ ಜೀ ಸಿನಿಮಾಸ್ ಬಂಡವಾಳ: ಪ್ಯಾನ್ ಇಂಡಿಯಾ ಚಿತ್ರಕ್ಕೆ ನರ್ತನ್ ನಿರ್ದೇಶನ

    ಐದು ತಿಂಗಳ ಮಗು ಉಳಿಸಲು 16 ಕೋಟಿ ರೂ. ದೇಣಿಗೆ ಸಂಗ್ರಹಿಸಿದ ದಂಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts