More

    ಪ್ರವೀಣ್​ ನೆಟ್ಟಾರ್ ಪತ್ನಿಗೆ ತಮ್ಮ ಕಚೇರಿಯಲ್ಲೇ ಉದ್ಯೋಗ ನೀಡಿ ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಬೊಮ್ಮಾಯಿ

    ಬೆಂಗಳೂರು: ನನ್ನ ಕಚೇರಿಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಕುಟುಂಬದವರಿಗೆ ಕೆಲಸ ಕೊಡ್ತೀನಿ ಎಂದು ಭರವಸೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಮಾತನ್ನು ಉಳಿಸಿಕೊಂಡಿಕೊಂಡಿದ್ದಾರೆ.

    ಪ್ರವೀಣ್ ನೆಟ್ಟಾರ್ ಅವರ ಕುಮಾರಿ ಎಂ. ಅವರಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಸಿಎಂ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.

    ಈ ಬಗ್ಗೆ ಬಿಜೆಪಿ ಟ್ವೀಟ್​ ಮಾಡಿದ್ದು, ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಶ್ರೀಮತಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾರ್ಯಕರ್ತರ ಹಿತರಕ್ಷಣೆಗೆ ಬಿಜೆಪಿ ಬದ್ಧವಾಗಿದೆ ಎಂದು ಟ್ವೀಟ್​ ಮಾಡಿದೆ.

    ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್​ ನೆಟ್ಟಾರ್​ ಅವರ ಗುಣಗಾನ ಮಾಡಲಾಯಿತು. ಇತ್ತೀಚಿಗೆ ನಿಧನರಾದ ಸಚಿವ ಉಮೇಶ್​ ಕತ್ತಿ ಅವರ ಫೋಟೋ ಜತೆಗೆ ಪ್ರವೀಣ್​ ನೆಟ್ಟಾರ್​ ಫೋಟೋವನ್ನೂ ಇಟ್ಟು ಬಿಜೆಪಿ ನಾಯಕರು ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದರು. ಇದೇ ವೇಳೆ ನನ್ನ ಕಚೇರಿಯಲ್ಲಿ ಪ್ರವೀಣ್​ ನೆಟ್ಟಾರ್​ ಕುಟುಂಬದವರಿಗೆ ಕೆಲಸ ಕೊಡ್ತೀನಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು

    ಕಳೆದ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್​ ನೆಟ್ಟಾರ್​ರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಇವರ ಹತ್ಯೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಪ್ರವೀಣ್​ ಕುಟುಂಬದ ಬೆನ್ನಿಗೆ ನಾವಿದ್ದೇವೆ ಎಂದು ಸಿಎಂ ಆ ವೇಳೆ ಅಭಯ ನೀಡಿದ್ದರು. ಅದರಂತೆ ಇಂದು ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಮಹತ್ವದ ಘೋಷಣೆ ಮಾಡಿದ್ದರು. ಇಂದು ಪ್ರವೀಣ್​ ನೆಟ್ಟಾರ್​ ಪತ್ನಿಗೆ ಉದ್ಯೋಗ ನೀಡಿ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

    ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ಪ್ರವೀಣ್ ನೆಟ್ಟಾರ್ ಕೊಲೆಯಾಗಿತ್ತು. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. (ದಿಗ್ವಿಜಯ ನ್ಯೂಸ್​)

    ಪ್ರವೀಣ್​ ನೆಟ್ಟಾರು ಕುಟುಂಬಸ್ಥರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ಕೊಡ್ತೀನಿ: ಸಿಎಂ ಘೋಷಣೆ

    ಹಾಸ್ಟೆಲ್​ ಸಿಬ್ಬಂದಿಯ ಮೊಬೈಲ್​ನಲ್ಲಿ ತಮ್ಮ ಸ್ನಾನದ ವಿಡಿಯೋ ನೋಡಿ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು: ಚಂಡೀಗಢ ಬಳಿಕ ಕಾನ್ಪುರ್​ನಲ್ಲಿ ಘಟನೆ

    ನಸುಕಿನ ಜಾವ ನವರಾತ್ರಿ ಪೂಜೆಗೆ ತೆರಳಿದ್ದ ಯುವತಿಯರಿಗೆ ಶಾಕ್​: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts