More

    ಗ್ರಾಹಕರಿಗೆ ಬೆಲೆ ಏರಿಕೆ ಶಾಕ್​: ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ 250 ರೂ. ಹೆಚ್ಚಳ

    ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ 250 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ.

    ಮಾರ್ಚ್​ 22ರಂದು ಏರಿಕೆಯಾದ ಗೃಹ ಬಳಕೆಯ ಎಲ್​ಪಿಜಿ ದರದಲ್ಲಿ ಮತ್ತೆ ಯಾವುದು ಬದಲಾವಣೆಯಾಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್​ ಬೆಲೆ 949.50 ರೂಪಾಯಿ ಇದೆ. ಇದು ಕೂಡ ದುಬಾರಿಯಾಗಿದ್ದು, ಜನ ಸಾಮಾನ್ಯರ ಗೋಳು ಕೇಳುವವರು ಇಲ್ಲದಂತಾಗಿದೆ.

    ಮುಂಬೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,205 ರೂ. ಇದ್ದರೆ, ಕೋಲ್ಕತ್ತದಲ್ಲ 2,351 ರಷ್ಟಿದೆ ಮತ್ತು ಚೆನ್ನೈನಲ್ಲಿ ಈಗ 19 ಕೆಜಿ ಸಿಲಿಂಡರ್ ಬೆಲೆ 2,406 ಕ್ಕೆ ಏರಿಕೆಯಾಗಿದೆ.

    ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ನಿರಂತರವಾಗಿ ದರ ಏರಿಕೆಯಾಗುತ್ತಿದೆ. ಕಳೆದ 10 ದಿನಗಳಲ್ಲಿ 9 ಬಾರಿ ಏರಿಕೆಯಾಗಿದ್ದ ಇಂಧನ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡಿಲ್ಲ. ಮಾರ್ಚ್​ 22ರಿಂದ ಇಲ್ಲಿಯವರೆಗೂ ಪ್ರತಿ ಲೀಟರ್​ಗೆ 6.40 ರೂಪಾಯಿ ಏರಿಕೆಯಾಗಿದೆ.

    ಬರೋಬ್ಬರಿ 137 ದಿನಗಳವರೆಗೆ ತಟಸ್ಥವಾಗಿದ್ದ ಇಂಧನ ದರ ಇದೀಗ ಏರುಗತಿಯಲ್ಲಿದೆ. 10 ದಿನದಲ್ಲಿ 9ನೇ ಬಾರಿ ಏರಿಕೆಯಾಗಿದೆ. ಪಂಚ ರಾಜ್ಯ ಚುನಾವಣೆ ಬೆನ್ನಲ್ಲೇ ಮತ್ತೆ ದರ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕವಾಗಿದೆ. ಭಾರತ ತನ್ನ ತೈಲ ಅಗತ್ಯದ ಸುಮಾರು 85% ನಷ್ಟು ಭಾಗವನ್ನು ಸಾಗರೋತ್ತರ ಮಾರುಕಟ್ಟೆಗಳಿಂದ ತರಿಸಿಕೊಳ್ಳುತ್ತಿದೆ.

    ಸ್ಥಳೀಯ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಅಂತರಾಷ್ಟ್ರೀಯ ಬೆಲೆಗಳಿಗೆ ಸಂಬಂಧಿಸಿವೆ. ಇದು ಕಚ್ಚಾ ತೈಲ ಬೆಲೆಗಳ ಮೇಲೆ ನಿರ್ಧಾರವಾಗಿರುತ್ತದೆ. ರಷ್ಯಾ ಮತ್ತು ಉಕ್ರೇನ್​ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾಗಿದ್ದು, ಇದು ಜಾಗತಿಕ ತೈಲ ಬೆಲೆಗಳ ಮೇಲೆ ಗಣನೀಯ ಪ್ರಭಾವ ಬೀರಿದೆ. ಅಲ್ಲದೆ, ಯುಎಸ್​ ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ. (ಏಜೆನ್ಸೀಸ್​)

    ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕಳುಹಿಸಿದ್ರೂ ಪಾಲಕರ ಪ್ಲಾನ್​ ಠುಸ್​!

    ಇದ್ದಕ್ಕಿದ್ದಂತೆ ಕಾಣೆಯಾದ ಪೋರ್ನ್​ ಸ್ಟಾರ್​: ಅಭಿಮಾನಿ ಕೊಟ್ಟ ದೂರಿನ ಬೆನ್ನಲ್ಲೇ ಶಾಕಿಂಗ್​ ಸಂಗತಿ ಬಯಲು!

    ಮೇಡಂ ಪ್ಲೀಸ್​​… ಕ್ಯಾಬ್​ ಚಾಲಕನ ಜತೆಗಿನ ವಿಚಿತ್ರ ಅನುಭವ ಬಿಚ್ಚಿಟ್ಟ ನಟಿ ಶ್ರದ್ಧಾ ಶ್ರೀನಾಥ್​..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts