

ಮಂಡ್ಯ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ (94) ಅವರು ತಡರಾತ್ರಿ 2.15ರ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ತಾಲೂಕಿನ ಹೊಳಲು ಗ್ರಾಮದ ತಮ್ಮ ನಿವಾಸದಲ್ಲಿ ಚೌಡಯ್ಯ ಅವರು ನಿಧನರಾಗಿದ್ದಾರೆ. 1928ರಲ್ಲಿ ಜನಿಸಿದ ಚೌಡಯ್ಯ ಅವರು ಕೃಷಿ ವಿಭಾಗದಲ್ಲಿ ಬಿಎಸ್ಸಿ ಪದವಿ ಶಿಕ್ಷಣ ಪಡೆದಿದ್ದರು. ಇವರು 4 ಬಾರಿ ಕೆರಗೋಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಕಾವೇರಿ ಹೋರಾಟದಲ್ಲಿ ಮಾದೇಗೌಡರೊಂದಿಗೆ ಪಾಲ್ಗೊಂಡಿದ್ದ ಚೌಡಯ್ಯ ಅವರು ಪಿಇಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದರು. (ದಿಗ್ವಿಜಯ ನ್ಯೂಸ್)