More

    ವೈರಲ್​ ಆಯ್ತು ಕಚ್ಚಾ ಬಾದಮ್​ ಹಾಡಿಗೆ ಪೊಲೀಸ್​ ಸಿಬ್ಬಂದಿ ಹಾಕಿದ ಸ್ಟೆಪ್ಸ್​: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ ನೋಡಿ…

    ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್​ ಎಬ್ಬಿಸಿರುವ ಹಾಡೆಂದರೆ ಅದು ಕಚ್ಚಾ ಬಾದಾಮ್. ಫೇಸ್​ಬುಕ್​, ಟ್ವಿಟರ್​, ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂ ಎಲ್ಲಿ ನೋಡಿದರೂ ಬರೀ ಕಚ್ಚಾ ಬಾದಾಮ್​ ರೀಮಿಕ್ಸ್​ ಹಾಡೇ ಕಣ್ಣು ಮುಂದೆ ಬರುತ್ತಿದೆ. ಇನ್ನೂ ಕೂಡ ಅದರ ಪ್ರಭಾವ ಮಾತ್ರ ಕಡಿಮೆಯಾಗಿಲ್ಲ. ಅಲ್ಲದೆ, ಈ ಹಾಡಿಗೆ ಫಿದಾ ಆದ ಎಷ್ಟೋ ಮಂದಿ ಸೊಂಟ ಬಳಕಿಸುತ್ತಿದ್ದಾರೆ. ಇದೀಗ ಪೊಲೀಸ್​ ಸಿಬ್ಬಂದಿ ಇದೇ ಹಾಡಿಗೆ ಡಾನ್ಸ್​ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​​ ಆಗಿದೆ.

    ಕಚ್ಚಾ ಬಾದಾಮ್​ ಹಾಡಿಗೆ ಪೊಲೀಸ್​ ಸಿಬ್ಬಂದಿ ಸ್ಟೆಪ್​ ಹಾಕಿರುವ ವಿಡಿಯೋವನ್ನು ಮಾರ್ಚ್​ 21ರಂದು @GoofyOlives ಹೆಸರಿನ ಟ್ವಿಟರ್​ ಖಾತೆಯಲ್ಲಿ ಅಪ್​​ಲೋಡ್​ ಮಾಡಲಾಗಿದ್ದು, ಖಾಕಿ ಏಕೆ ಸ್ವಲ್ಪ ಮೋಜು ಮಾಡಬಾರದು ಎಂದು ಶೀರ್ಷಿಕೆ ನೀಡಲಾಗಿದೆ.

    ವಿಡಿಯೋದಲ್ಲಿ ಓರ್ವ ಮಹಿಳಾ ಪೊಲೀಸ್​ ಸಿಬ್ಬಂದಿ ಸೇರಿದಂತೆ ಐವರು ಸಿಬ್ಬಂದಿ ಕಚ್ಚಾ ಬಾದಮ್​ ಹಾಡಿಗೆ ಡಾನ್ಸ್​ ಮಾಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಇದುವರೆಗೂ 500 ಕ್ಕೂ ಹೆಚ್ಚ ರೀಟ್ವೀಟ್​ ಮತ್ತು 1 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಅಲ್ಲದೆ, 3 ಸಾವಿರಕ್ಕೂ ಅಧಿಕ ಮಂದಿ ಲೈಕ್ಸ್​ ಮಾಡಿದ್ದಾರೆ.

    ವಿಡಿಯೋ ನೋಡಿದ ನೆಟ್ಟಿಗರಲ್ಲಿ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು ಯೂನಿಫಾರ್ಮ್​ನಲ್ಲಿ ಡಾನ್ಸ್​ ಮಾಡಿದ್ದಕ್ಕೆ ಟೀಕೆ ಮಾಡಿದ್ದಾರೆ. ಅದು ಏನೇ ಇರಲಿ ಕಚ್ಚಾ ಬಾದಾಮ್​ ಹಾಡು ಸೃಷ್ಟಿಸಿರುವ ಹವಾ ಮಾತ್ರ ಭಾರೀ ಜೋರಾಗಿದೆ. ಯಾರನ್ನೂ ಬಿಡದೆ ಎಲ್ಲರನ್ನೂ ಮರಳು ಮಾಡುತ್ತಿದೆ ಎಂಬುದಕ್ಕೆ ಈ ವಿಡಿಯೋನೇ ಸಾಕ್ಷಿಯಾಗಿದೆ.

    ಹಾಡಿನ ಹಿನ್ನೆಲೆ ಏನು?
    ಪಶ್ಚಿಮ ಬಂಗಾಳದ ಬಿರ್​ಭಮ್​ ಜಿಲ್ಲೆಯ ನಿವಾಸಿ ಆಗಿರುವ ಭುವನ್ ಬದ್ಯಕರ್​​ ಕಚ್ಚಾ ಬಾದಾಮ್​ ಹಾಡು ಹೇಳಿಕೊಂಡು ಊರೂರು ತಿರುಗುತ್ತಾ ಕಡಲೆಕಾಯಿ ಮಾರಾಟ ಮಾಡಿ ಒಂದೆರೆಡು ಕಾಸು ಸಂಪಾದನೆ ಮಾಡುತ್ತಿದ್ದರು. ಅವರ ಹಾಡನ್ನು ಗುರುತಿಸಿದ ಗೋಧುಲಿಬೆಲಾ ಮ್ಯೂಸಿಕ್​ ಕಂಪನಿ ರೀಮಿಕ್ಸ್​ ಮಾಡಿ, ಭುವನ್​ ಕೈಯಲ್ಲೇ ಹಾಡಿಸಿದ್ದಾರೆ. ಇದಾದ ಬಳಿಕ ಭುವನ್​ ಬದುಕೇ ಬದಲಾಗಿದೆ. ಕಚ್ಚಾ ಬಾದಾಮ್​ ಒರಿಜಿನಲ್​ ಸಾಂಗ್​ ಅನ್ನು ರೀಮಿಕ್ಸ್​ ಮಾಡಲು ಸಂಭಾವನೆಯಾಗಿ ಭುವನ್​ಗೆ 3 ಲಕ್ಷ ರೂ. ನೀಡಲಾಗಿದೆ ಎಂದು ತಿಳಿದುಬಂದಿದೆ. ಕಡಲೆಕಾಯಿ ಮಾರಾಟ ಮಾಡಿ ದಿನದೂಡುತ್ತಿದ್ದ ಭುವನ್​ ಇದೀಗ ಕಚ್ಚಾ ಬಾದಾಮ್​ ಮೂಲಕ ಖ್ಯಾತಿಯಾಗಿದ್ದು, ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅವರ ಲಕ್​ ಬದಲಾಗಿದೆ. (ಏಜೆನ್ಸೀಸ್​)

    ಜಾಲತಾಣದಲ್ಲಿ ಧೂಳೆಬ್ಬಿಸಿದ ಕಚ್ಚಾ ಬಾದಾಮ್​ ಹಾಡಿಗೆ ಭುಬನ್ ಪಡೆದ ಹಣದ ಮೊತ್ತ ಕೇಳಿದ್ರೆ ಅಚ್ಚರಿ ಖಂಡಿತ!

    ಅದೃಷ್ಟದ ಬೆನ್ನಲ್ಲೇ ಕಚ್ಚಾ ಬಾದಾಮ್​ ಗಾಯಕನಿಗೆ ದುರಾದೃಷ್ಟ: ಕಾರು ಖರೀದಿಸಿದವನಿಗೆ ಕಾದಿತ್ತು ಶಾಕ್!​​​

    ಬಿಜೆಪಿ ನಾಯಕನ ಹೇಳಿಕೆ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಶಾಕಿಂಗ್​ ಕಾಮೆಂಟ್​ ಮಾಡಿದ ಪ್ರಕಾಶ್​ ರಾಜ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts