ಬೆಂಗಳೂರು: ರಾಜ್ಯದ ಎಲ್ಲ ಸಂಘ ಸಂಸ್ಥೆಗಳ ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳನ್ನು ಮುಂದೂಡಿ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಸಾಂಕ್ರಾಮಿಕ ರೋಗದ 3ನೇ ಅಲೆಯಿಂದಾಗಿ ಹಾಗೂ ಒಮಿಕ್ರಾನ್ ರೂಪಾಂತರ ತಳಿಯು ವ್ಯಾಪಕವಾಗಿ ಹರಡುತ್ತಿರುವ ಕಾರಣ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಜಾರಿಗೆ ತಂದಿದ್ದು ಪ್ರಸ್ತುತ ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ.
ಪ್ರಸ್ತುತ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನುಸಾರ ರಾಜ್ಯದಲ್ಲಿರುವ ಸಂಘ ಸಂಸ್ಥೆಗಳ ಚುನಾವಣೆ/ಉಪ ಚುನಾವಣೆಗಳನ್ನು ಕೋವಿಡ್ ನಿಯಮಗಳ ಪಾಲನೆ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸುವುದು ಕಷ್ಟಸಾಧ್ಯವಾಗಬಹುದು. ಅಲ್ಲದೆ, ಚುನಾವಣೆಗಳು ಜರುಗಿದಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಎಲ್ಲ ಸಂಘ ಸಂಸ್ಥೆಗಳ ಚುನಾವಣೆ/ಉಪ ಚುನಾವಣೆಗಳನ್ನು ಮಾರ್ಚ್ 2022 ರ ಅಂತ್ಯದವರೆಗೆ ಅಥವಾ ಮುಂದಿನ ಆದೇಶದವರೆಗೂ ಮುಂದೂಡಿ ಸಹಕಾರ ಇಲಾಖೆ ಆದೇಶಿಸಿದೆ.
ಈಗಾಗಲೇ ಚುನಾವಣಾ ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವ ಪ್ರಕರಣಗಳಿಗೂ ಸಹ ಈ ಕ್ರಮ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ. ಈ ಹಿಂದೆ ಸಹಕಾರ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಳನ್ನು ಡಿಸೆಂಬರ್ 2021ರ ಅಂತ್ಯದ ವರೆಗೆ ಮುಂದೂಡಲಾಗಿತ್ತು.
ಕೆಲವೇ ತಿಂಗಳ ಹಿಂದೆ ನಿಕ್ಕಿ ಗಲ್ರಾನಿ ಮನೆಯಲ್ಲಿ ಕೆಲ್ಸಕ್ಕೆ ಸೇರಿದ್ದ ಯುವಕನಿಂದ ನೀಚ ಕೃತ್ಯ..!
ಕರೊನಾದಿಂದ ಬಳಲುತ್ತಿದ್ದ ಕಿರಾತಕ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ರಾಜ್ ನಿಧನ
ಕರೊನಾ 3ನೇ ಅಲೆ ತೀವ್ರಗೊಳ್ಳುವ ಭೀತಿಯ ನಡುವೆ ದೇಶದ ಜನತೆಗೆ ಶುಭ ಸೂಚನೆ ಕೊಟ್ಟ ಮುಂಬೈ!