More

    ಮಂಡ್ಯದಲ್ಲಿ ರುಂಡವಿಲ್ಲದ ಮೃತದೇಹ ಪತ್ತೆ ಕೇಸ್​: 2 ತಿಂಗಳ ನಂತ್ರ ಮಹಿಳೆಯರಿಬ್ಬರ ಮರ್ಡರ್ ಮಿಸ್ಟರಿ ಬಯಲು

    ಮಂಡ್ಯ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ, ಮಹಿಳೆಯರ ದೇಹವನ್ನು ತುಂಡರಿಸಿ ನಾಲೆಯಲ್ಲಿ ಎಸೆದು ಹೋಗಿದ್ದ ಪ್ರಕರಣವನ್ನು ಭೇದಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಹಣಕಾಸಿನ ವಿಚಾರಕ್ಕೆ ಕೃತ್ಯವೆಸಗಿದ್ದ ಡಿ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ರಾಮನಗರ ಜಿಲ್ಲೆ ಮಾಗಡಿ ತಾಲೂಕು ಕುದೂರು ಹೋಬಳಿಯ ಕೋಡಿಹಳ್ಳಿ ಕಾಲನಿ ನಿವಾಸಿ ಹಾಗೂ ಪಾಂಡವಪುರ ತಾಲೂಕಿನ ಹರವು ಗ್ರಾಮದ ಮಹಿಳೆಯನ್ನು ಬಂಧಿಸಲಾಗಿದೆ. ಇವರಿಬ್ಬರು ಮೂರು ಕೊಲೆಗಳನ್ನು ಮಾಡಿದ್ದು, ಮತ್ತೆ 5 ಕೊಲೆಗಳಿಗೆ ಸಂಚು ರೂಪಿಸಿದ್ದರು ಎಂದು ದಕ್ಷಿಣ ವಲಯ ಪೊಲೀಸ್‌ ಮಹಾನಿರೀಕ್ಷಕ ಪ್ರವೀಣ್ ಮಧುಕ‌ ಪವಾರ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು, ಆದರೆ ಕಾನೂನಿನ ನಿಯಮದಂತೆ ಆರೋಪಿಗಳ ಹೆಸರನ್ನು ಬಹಿರಂಗಪಡಿಸಲಿಲ್ಲ.

    ಹಣಕಾಸಿನ ವ್ಯವಹಾರ, ವೈಯಕ್ತಿಕ ಕಾರಣಕ್ಕೆ ಕೊಲೆಗಳನ್ನು ಮಾಡಲಾಗಿದೆ. ಕೊಲೆಯಾದ ಇಬ್ಬರು ಮಹಿಳೆಯರು ಆರೋಪಿಗಳಿಗೆ ಹಿಂದೆಯೇ ಪರಿಚಯವಿದ್ದು, ಗಾರ್ಮೆಂಟ್ಸ್ ಮತ್ತು ನರ್ಸಿಂಗ್ ಹೋಂ ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಇಬ್ಬರನ್ನೂ ಮೇಟಗಳ್ಳಿಯ ಬಾಡಿಗೆ ಮನೆಗೆ ಕರೆಸಿಕೊಂಡು ಕೊಲೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಪಾರ್ವತಿ, ಚಾಮರಾಜನಗರದ ಗೀತಾ ಅಲಿಯಾಸ್ ಪುಟ್ಟಿ ಕೊಲೆಯಾದವರು, ಪಾರ್ವತಿಯನ್ನು ಮೇ 30ರಂದು, ಗೀತಾಳನ್ನು ಜೂ. 3ರಂದು ಕೊಲೆ ಮಾಡಲಾಗಿತ್ತು. ಶವಗಳನ್ನು ಬೈಕ್‌ಗಳಲ್ಲಿ ಸಾಗಿಸುವುದು ಕಷ್ಟವೆಂಬ ಕಾರಣಕ್ಕೆ ದೇಹಗಳನ್ನು ಅರ್ಧಕ್ಕೆ ತುಂಡರಿಸಿ ಬೇರೆ ಬೇರೆ ಕಡೆ ಬೀಸಾಡಿಸಿದ್ದರು ಎಂದು ವಿವರಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಎಎಸ್‌ಪಿ ವೇಣುಗೋಪಾಲ್, ಶ್ರೀರಂಗಪಟ್ಟಣ ಡಿವೈಎಸ್‌ಪಿ ಸಂದೇಶ್‌ಕುಮಾರ್ ಹಾಜರಿದ್ದರು.

    1116ಕ್ಕೂ ಹೆಚ್ಚು ನಾಪತ್ತೆ ಪ್ರಕರಣ ಪರಿಶೀಲನೆ
    ಜೂ.7ರಂದು ಪಾಂಡವಪುರ ತಾಲೂಕು ಬೇಬಿ ಗ್ರಾಮದ ಕೆರೆಕೋಡಿ ಕಟ್ಟೆ ಕೆಳಗೆ ಹರಿಯುವ ನೀರಿನಲ್ಲಿ 30-32 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಮಾಡರಹಳ್ಳಿ ರಸ್ತೆ ಬಳಿ ಸಿಡಿಎಸ್‌ ನಾಲೆಗೆ ಸಂಪರ್ಕಿ ಸುವ ಸಾಲೋಡು ಹಳ್ಳದ ಪಕ್ಕದ ಕೈಲ ಭತ್ತದ ಗದ್ದೆಯಲ್ಲಿ 40-45 ವರ್ಷ ವಯಸ್ಸಿನ ಮತ್ತೊಬ್ಬ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದವು. ಎಂದು ಪ್ರವೀಣ್ ಮಧುಕ‌ ಪವಾರ್‌ ಹೇಳಿದರು. ಎರಡೂ ಪ್ರಕರಣಗಳಲ್ಲಿ ತುಂಡರಿಸಿದ್ದ ಮಹಿಳೆಯರ ಅರ್ಧ ದೇಹಗಳು ಮಾತ್ರ ಪತ್ತೆಯಾಗಿದ್ದವು. ಎರಡೂ ಶವಗಳಲ್ಲಿ ಸೊಂಟದಿಂದ ಮೇಲ್ಬಾಗದ ದೇಹವೇ ಇರಲಿಲ್ಲ. ಇದರಿಂದಾಗಿ ಗುರುತು ಪತ್ತೆಯಾಗದ ಹಿನ್ನೆಲೆ ಯಲ್ಲಿ ಈ ಪ್ರಕರಣ ಗಳು ಪೊಲೀಸರಿಗೆ ಸವಾಲಾಗಿದ್ದವು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿರಕ್ಕೂ ಹೆಚ್ಚು ಕರ ಪತ್ರ ಗಳನ್ನು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಹಂಚಿಕೆ ಮಾಡಿ, ಮೃತರ ಗುರುತು ಪತ್ತೆಗಾಗಿ ಜನರು ಹಾಗೂ ಪೊಲೀಸರ ಸಹಕಾರ ಕೋರಲಾಗಿತ್ತು. ಜತೆಗೆ 9 ತನಿಖಾ ತಂಡಗಳನ್ನು ರಚಿಸಿ, ತಾಂತ್ರಿಕ ಮಾಹಿತಿ ಕಲೆ ಹಾಕಲು 2 ತಾಂತ್ರಿಕ ಪರಿಣತ ತಂಡಗಳನ್ನು ರಚಿಸಲಾಗಿತ್ತು.

    ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 1116ಕ್ಕೂ ಹೆಚ್ಚಿನ ಮಹಿಳೆಯರು ಕಾಣೆಯಾದ ಪ್ರಕರಣಗಳನ್ನು ಪರಿಶೀಲಿಸಲಾಗಿತ್ತು. ಕಡೆಗೆ ಜೂನ್ ಗೀತಾ ಕಾಣಿಯಾಗಿದ್ದ ಪ್ರಕರಣ ಜು.7ರಂದು ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು. ಎರಡೂ ಪ್ರಕರಣಗಳಲ್ಲಿ ಸಾಮ್ಯತೆ ಇದ್ದವು. ಗೀತಾಳ ಮೊಬೈಲ್ ಕರೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ವಿವರಿಸಿದರು. ವಿಚಾರಣಿ ವೇಳೆ ಬೆಂಗಳೂರಿನಲ್ಲಿ ಕುಮುದಾ ಎಂಬ ಮತ್ತೊಬ್ಬ ಮಹಿಳೆಯನ್ನು ಕೊಲೆ ಮಾಡಿ, ಚಿತ್ರದುರ್ಗದವರೆಗೆ ಬೈಕ್‌ನಲ್ಲೇ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

    ಯಾದಗಿರಿಯಲ್ಲಿ ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

    ಕರ್ನಾಟಕದಲ್ಲಿ ಒನ್ ಹೆಲ್ತ್ ಯೋಜನೆ: ಮಲೆನಾಡಿನಲ್ಲಿ ಕೆಎಫ್​ಡಿ ಅಧ್ಯಯನ  

    ಲಾಲ್ ಸಿಂಗ್ ಛಡ್ಡಾ ಪ್ರಹಸನ, ಚಿತ್ರರಂಗದ ಜಾಗತೀಕರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts