More

    ಯುಪಿ ಚುನಾವಣೆ: ಟಿಕೆಟ್​ ಸಿಗದಿದ್ದಕ್ಕೆ ಪಕ್ಷದ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಎಸ್​ಪಿ ಕಾರ್ಯಕರ್ತ

    ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ಸಿಗದಿದ್ದಕ್ಕೆ ಮನನೊಂದ ಸಮಾಜವಾದಿ ಪಕ್ಷ(ಎಸ್​ಪಿ)ದ ಕಾರ್ಯಕರ್ತನೊಬ್ಬ ಲಖನೌದಲ್ಲಿರುವ ಪಕ್ಷದ ಕಚೇರಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

    ಆದಿತ್ಯ ಠಾಕೂರ್​ ಆತ್ಮಹತ್ಯೆಗೆ ಯತ್ನಿಸಿದ ಎಸ್​ಪಿ ಕಾರ್ಯಕರ್ತ. ಈತ ಆಲಿಗಢ ಕ್ಷೇತ್ರದ ನಿವಾಸಿ. ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದ. ಆದರೆ, ಪಕ್ಷದಿಂದ ಟಿಕೆಟ್​ ಸಿಗದಿದ್ದಕ್ಕೆ ಮನನೊಂ ಠಾಕೂರ್​ ಲಖನೌದ ವಿಕ್ರಮಾದಿತ್ಯ ಮಾರ್ಗದಲ್ಲಿರುವ ಪಾರ್ಟಿಯ ಮುಖ್ಯ ಕಚೇರಿಯ ಮುಂಭಾಗದಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ. ಈ ವೇಳೆ ಪಾದಾಚಾರಿಗಳು ಮತ್ತು ಸ್ಥಳದಲ್ಲಿದ್ದ ಪೊಲೀಸರು ತಡೆದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಏನೇ ಬರಲಿ ನಾನಿಂದು ಇಲ್ಲಿಯೇ ನನ್ನ ಪ್ರಾಣವನ್ನು ತೆಗೆದುಕೊಳ್ಳುತ್ತೇನೆ. ಜೈಲಿಗೆ ಹಾಕಿದರೂ ಕೂಡ ನನ್ನನ್ನು ತಡೆಯಲು ಸಾಧ್ಯವಿಲ್ಲ. ನನಗೆ ನ್ಯಾಯ ಬೇಕಿದೆ ಎಂದು ಮಾಧ್ಯಮಗಳ ಮುಂದೆ ಠಾಕೂರ್​ ಅಳಲು ತೋಡಿಕೊಂಡಿದ್ದಾರೆ.

    ತಮ್ಮ ಟಿಕೆಟ್ ಅನ್ನು ಪಕ್ಷವು ದೋಚಿಕೊಂಡು ಅದನ್ನು “ಹೊರಗಿನವರಿಗೆ” ನೀಡಿದೆ ಎಂದು ಠಾಕೂರ್ ಅವರು ಆರೋಪಿಸಿದ್ದಾರೆ. ನನ್ನ ವಿರುದ್ಧ ಯಾವುದೇ ಕ್ರಮಿನಲ್​ ದಾಖಲೆಗಳಿಲ್ಲ. ಆದರೂ ನನಗೆ ಟಿಕೆಟ್​ ಅನ್ನು ಪಕ್ಷವೂ ನಿರಾಕರಿಸಿದೆ ಎಂದು ಹೇಳಿದ್ದಾರೆ. ಠಾಕೂರ್ ಅವರು ಅಲಿಗಢದ ಛಾರಾ ಕ್ಷೇತ್ರದಿಂದ ಯುಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದರು. ಆದರೆ, ಪಕ್ಷದಿಂದ ಟಿಕೆಟ್ ನೀಡಲಿಲ್ಲ ಎಂದು ಮೂಲಗಳು ತಿಳಿಸಿವೆ.

    ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ ಮೈತ್ರಿಕೂಟವು ಜನವರಿ 13 ರಂದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 29 ಸ್ಥಾನಗಳ ಪೈಕಿ ಎಸ್​ಪಿ 10 ಮತ್ತು ಆರ್​ಎಲ್​ಡಿ 19 ಅಭ್ಯರ್ಥಿಗಳನ್ನು ಪಟ್ಟಿ ಮಾಡಿದೆ. ಎರಡು ಪಕ್ಷಗಳು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

    ಉತ್ತರಪ್ರದೇಶದಲ್ಲಿ ಫೆ.10ರಿಂದ ಮಾ. 7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜ. 15ರ ವರೆಗೂ ರಾಜಕೀಯ ಪಕ್ಷಗಳಿಗೆ ಭೌತಿಕ ಪ್ರಚಾರ, ರೋಡ್‌ಶೋಗಳಿಗೆ ಅವಕಾಶ ಇರುವುದಿಲ್ಲ. ನಂತರ ಆ ಸಮಯದ ಪರಿಸ್ಥಿತಿಗೆ ಅನುಗಣವಾಗಿ ಹೊಸ ಸೂಚನೆಗಳನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. (ಏಜೆನ್ಸೀಸ್​)

    ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಗೋರಖ್​ಪುರ್ ಕ್ಷೇತ್ರದಿಂದ ಸಿಎಂ ಯೋಗಿ ಸ್ಪರ್ಧೆ

    ಜನರೇ ಎಚ್ಚರ ನಿಮಗೂ ಹೀಗಾಗಬಹುದು…ಪಿಜ್ಜಾ ತಿನ್ನುವ ಆಸೆಯಿಂದ 11 ಲಕ್ಷ ರೂ. ಕಳೆದುಕೊಂಡು ವೃದ್ಧೆ!

    ಇದು ಅತ್ಯಾಚಾರಿಗಳನ್ನು ಪ್ರೀತಿಸೋ ಸಮಾಜ: ನಟಿ ಪಾರ್ವತಿ ನೋವಿಗೆ ಗಾಯಕಿ ಚಿನ್ಮಯಿ ಸಾಂತ್ವಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts