More

    10 ವರ್ಷದ ಮಗಳನ್ನು ಕಾಮತೃಷೆಗೆ ಬಳಸಿಕೊಳ್ತಿದ್ದ ಉಪ ತಹಸೀಲ್ದಾರ್​ಗೆ ಘನ ಘೋರ ಶಿಕ್ಷೆ ವಿಧಿಸಿದ ಕೋರ್ಟ್​!

    ತಿರುವನಂತಪುರಂ: ಹತ್ತು ವರ್ಷದ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿವಿಧ ಪ್ರಕರಣಗಳ ಅಡಿಯಲ್ಲಿ ಉಪ ತಹಸೀಲ್ದಾರ್​ಗೆ ಕೇರಳ ನ್ಯಾಯಾಲಯ 17 ವರ್ಷಗಳ ಘನ ಘೋರ ಶಿಕ್ಷೆಯನ್ನು ವಿಧಿಸಿದೆ.

    ತಿರುವನಂತಪುರದ ಪ್ರಧಾನ ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ವಿ. ರಾಜೇಶ್​ ಅವರು ಈ ಮಹತ್ವದ ಆದೇಶವನ್ನು ನೀಡಿದ್ದಾರೆ. ಜೈಲು ಶಿಕ್ಷೆ ಮಾತ್ರವಲ್ಲದೆ, 16.5 ಲಕ್ಷ ರೂಪಾಯಿ ದಂಡ ಪಾವತಿಸಲು ನ್ಯಾಯಾಲಯ ಆದೇಶಿಸಿದ್ದು, ದಂಡ ಪಾವತಿಸದಿದ್ದರೆ, ಇನ್ನೆರಡು ವರ್ಷಗಳ ಹೆಚ್ಚುವರಿ ಶಿಕ್ಷೆಯನ್ನು ವಿಧಿಸಲಾಗಿದೆ.

    ಪ್ರಕರಣದ ಹಿನ್ನೆಲೆ ಏನು?
    2019ರಲ್ಲಿ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಇದಾದ ಬಳಿಕ ಸಂತ್ರಸ್ತೆ ತನ್ನ ತಂದೆಯ ಜತೆ ಮಲಗಿಕೊಳ್ಳುತ್ತಿದ್ದಳು. ಉಪ ತಹಸೀಲ್ದಾರ್​ ಆಗಿ ಜವಬ್ದಾರಿಯುತ ಸ್ಥಾನದಲ್ಲಿದ್ದ ತಂದೆ ಈ ಸಮಯದಲ್ಲಿ ದುರುದ್ದೇಶದಿಂದ ಮಗಳನ್ನು ತಬ್ಬಿಕೊಂಡು, ಆಕೆಯ ತುಟಿಯನ್ನು ಚುಂಬಿಸಿ, ಆಕೆಯ ಗುಪ್ತಾಂಗವನ್ನು ಸ್ಪರ್ಶಿಸುವುದನ್ನು ಮಾಡಿದ್ದಾನೆ.

    ತರಗತಿಯಲ್ಲಿ ಸಂತ್ರಸ್ತೆ ಯಾವಾಗಲೂ ಮೌನವಾಗಿರುವುದನ್ನು ಗಮನಿಸಿದ ಟೀಚರ್​ ಆಕೆಯನ್ನು ವಿಚಾರಿಸಿದಾಗ ತಂದೆಯಿಂದ ಲೈಂಗಿಕ ದೌರ್ಜ್ಯನ್ಯ ಎದುರಿಸುತ್ತಿರುವುದಾಗಿ ಹೇಳಿದ್ದಾಳೆ. ಈ ವಿಚಾರವನ್ನು ಟೀಚರ್​, ಮುಖ್ಯೋಪಾಧ್ಯಯರಿಗೆ ಮತ್ತು ಶಾಲೆಯ ಕೌನ್ಸಿಲರ್​ಗೆ ತಿಳಿಸಿದ್ದಾರೆ. ಇದಾದ ಬಳಿಕ ಆರೋಪಿ ತಂದೆಯ ವಿರುದ್ಧ ಕೇರಳದ ಪಂಗೋಡ್​ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡರು. ಈ ಪ್ರಕರಣವನ್ನು ಅಪರಾಧ ವಿಭಾಗದ ಉಪ ಪೊಲೀಸ್​ ವರಿಷ್ಠಾಧಿಕಾರಿ ಎ. ಪ್ರಮೋದ್​ ಕುಮಾರ್​ ತನಿಖೆ ನಡೆಸಿ, ಆರೋಪಿ ತಂದೆಯ ವಿರುದ್ಧ ಚಾರ್ಜ್​ಶೀಟ್​ ದಾಖಲಿಸುತ್ತಾರೆ.

    ಮಗಳನ್ನು ನೋಡಿಕೊಳ್ಳಬೇಕಾದ ಸ್ವಂತ ತಂದೆಯೇ ಆಕೆಯ ಮೇಲೆ ದೌರ್ಜನ್ಯ ಎಸಗಿರುವುದು ಘೋರ ಅಪರಾಧ ಮತ್ತು ಆರೋಪಿಯು ಯಾವುದೇ ಕರುಣೆಗೆ ಅರ್ಹನಲ್ಲ ಎಂದು ನ್ಯಾಯಾಲಯ ಅಂತಿಮವಾಗಿ ತೀರ್ಪು ನೀಡಿದೆ. ಮಗುವಿಗೆ ಕಾನೂನಾತ್ಮಕವಾಗಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ಘಟನೆಯಲ್ಲಿ, ಪ್ರಾಸಿಕ್ಯೂಷನ್ ಕಡೆಯಿಂದ 19 ಸಾಕ್ಷಿಗಳನ್ನು ಪರೀಕ್ಷಿಸಲಾಯಿತು ಮತ್ತು 21 ದಾಖಲೆಗಳನ್ನು ಸಾಕ್ಷ್ಯವಾಗಿ ಸಲ್ಲಿಸಲಾಯಿತು. (ಏಜೆನ್ಸೀಸ್​)

    ಸುಳ್ಳು ಮಾಹಿತಿ ನೀಡಿದ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿದ ಚಾಮರಾಜನಗರದ ಜಿಲ್ಲಾಧಿಕಾರಿ

    ತುಂಬಿದ ಗ್ರಾಮ ಸಭೆಯಲ್ಲಿ ಸರ್ಕಾರಿ ಅಧಿಕಾರಿಗೆ ಚಪ್ಪಲಿಯಲ್ಲಿ ಬಾರಿಸಿದ ಗ್ರಾ.ಪಂ ಉಪಾಧ್ಯಕ್ಷೆಗೆ ಮರುಕ್ಷಣವೇ ಶಾಕ್!​

    ಕಾನ್​ ಅಂತಾರಾಷ್ಟ್ರೀಯ ಚಿತ್ರೋತ್ಸವದ ಮುಂಬರುವ ಮಾರ್ಚೆ ಡು ಫಿಲ್ಮ್‌ನಲ್ಲಿ ಭಾರತಕ್ಕೆ ಗೌರವ ರಾಷ್ಟ್ರ ಸ್ಥಾನಮಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts