ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಶಿವಣ್ಣ ಬೆಲ್ಲದ ನಿಧನ

ಧಾರವಾಡ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ ಅವರು ಮೃತಪಟ್ಟಿದ್ದಾರೆ. ಬುಧವಾರ ತಡರಾತ್ರಿ ಧಾರವಾಡದ ಎಸ್ಪಿ ಕಚೇರಿ ಎದುರು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಿವಣ್ಣ ಅವರನ್ನು ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಶಿವಣ್ಣ ಅವರು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಹೋದರರಾಗಿದ್ದರು. ವಿದ್ಯಾವರ್ಧಕ ಸಂಘದ ಹಿಂದಿನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಲಿಂಗಾಯತ ಸಮಾಜದ ಮುಖಂಡರಾಗಿದ್ದ ಶಿವಣ್ಣ ಅವರ ಅಂತ್ಯಕ್ರಿಯೆ ಇಂದು … Continue reading ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಶಿವಣ್ಣ ಬೆಲ್ಲದ ನಿಧನ