More

    ಕಲಾಪಗಳು ಆರಂಭವಾಗುವ ಮುನ್ನ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು: ಡಿಕೆಶಿ ಆಗ್ರಹ

    ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆಯಲ್ಲಿ ಕೇಸರಿ ಧ್ವಜವೂ ಹಾರಾಡಬಹುದು ಎಂಬ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕರು ರಾಜೀನಾಮೆಗೆ ಆಗ್ರಹಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಸುಗಮವಾಗಿ ನಡೆಯಬೇಕಿದ್ದ ಕಲಾಪ ಇದೇ ವಿಚಾರವಾಗಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವಿನ ಜಟಾಪಟಿ ವೇದಿಕೆಯಾಗಿ ಮಾರ್ಪಾಡಾಗಿದ್ದು, ಒಂದೆರೆಡು ಬಾರಿ ಕಲಾಪವು ಮುಂದೂಡಲಾಗಿದೆ. ನಾಳೆ ಕಲಾಪ ಆರಂಭಕ್ಕೂ ಮುನ್ನವೇ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಆಗ್ರಹಿಸಿದ್ದಾರೆ.

    ಕೂ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಡಿಕೆಶಿ, ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ದೇಶದ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡುತ್ತಿದ್ದೇವೆ. ಭಾರತದ ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವುದು ಮೂಲಭೂತ ಹಕ್ಕು ಎಂದು ಸಂವಿಧಾನದ ವಿಧಿ 51ಎ ಹೇಳುತ್ತದೆ. ಜನಪ್ರತಿನಿಧಿಗಳಾಗಿ, ಭಾರತೀಯರಾಗಿ ನಾವು ರಾಷ್ಟ್ರಧ್ವಜಕ್ಕೆ ಅಪಮಾನ ಎಸಗುವ ಯಾವ ತಪ್ಪನ್ನೂ ಮಾಡಿಲ್ಲ.

    ಸಚಿವರಾಗಿ ಪ್ರಮಾಣ ಸ್ವೀಕರಿಸುವಾಗ ಸಂವಿಧಾನದ ಆಶಯಗಳಿಗೆ, ದೇಶದ ಹಿತಾಸಕ್ತಿಗೆ ಗೌರವ ತೋರಿ ನಡೆಯುವುದಾಗಿ ಪ್ರಮಾಣ ಮಾಡುತ್ತಾರೆ. ಹಾಗೆ ಪ್ರಮಾಣ ಮಾಡಿದ ಸಚಿವ ಈಶ್ವರಪ್ಪ ಅವರು ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವುದು ದೇಶದ್ರೋಹವಲ್ಲದೆ ಮತ್ತಿನ್ನೇನು?

    ಇಂಥ ಹೇಳಿಕೆ ನೀಡಿದ ಸಚಿವರ ವಿರುದ್ಧ ಗವರ್ನರ್‌ ಅವರು ಕ್ರಮ ಕೈಗೊಳ್ಳಬೇಕಿತ್ತು. ಮುಖ್ಯಮಂತ್ರಿಗಳು ರಾಜೀನಾಮೆ ಪಡೆಯಬೇಕಿತ್ತು. ಪೊಲೀಸರು ಸೊಮೊಟೊ ಪ್ರಕರಣ ದಾಖಲಿಸಬೇಕಿತ್ತು. ಕಾಂಗ್ರೆಸ್‌ ಪಕ್ಷದ ನಾಯಕರ ಸಣ್ಣ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸಿ ಜೈಲಿಗಟ್ಟಿದ ಬಿಜೆಪಿ ಸರ್ಕಾರಕ್ಕೆ ಈಶ್ವರಪ್ಪ ಅವರ ಹೇಳಿಕೆಯಲ್ಲಿ ತಪ್ಪು ಕಾಣಿಸಲಿಲ್ಲವೇ?

    ಸಚಿವರೇ ತಾವು ಕೇಸರಿ ಧ್ವಜ, ಶಾಲನ್ನು ಸೂರತ್‌ನಿಂದ ತರಿಸಿ ಹಂಚಿದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಚಿವರು ಇಂದೂ ಕೂಡ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಕನಿಷ್ಠ ಪಕ್ಷ ಈಗಲಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ಮೌನವಾಗಿರುವುದು ಏಕೆ?

    ನಾಳೆ (ಫೆ.18) ಬೆಳಗ್ಗೆ ವಿಧಾನಸಭಾ ಕಲಾಪಗಳು ಆರಂಭವಾಗುವ ಮುನ್ನ ಮುಖ್ಯಮಂತ್ರಿಗಳು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೊಂದುವೇಳೆ ಕ್ರಮ ಕೈಗೊಳ್ಳದಿದ್ದರೆ ಸದನದ ಒಳಗೆ ಮತ್ತು ಹೊರಗೆ ನಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಡಿಕೆಶಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    Koo App

    ಸರ್ಕಾರದ ತಪ್ಪುಗಳ ವಿರುದ್ಧ ಧ್ವನಿ ಎತ್ತುವುದು ವಿರೋಧಪಕ್ಷದ ಕರ್ತವ್ಯ. ಹಾಗಾಗಿ ರಾಷ್ಟ್ರಧ್ವಜಕ್ಕೆ ಅಪಮಾನಿಸಿರುವ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ. ಸೂಕ್ತ ಕ್ರಮ ಜರುಗುವವರೆಗೂ ಹೋರಾಟ ಕೈಬಿಡುವುದಿಲ್ಲ. ದೇಶ ಒಡೆಯುವ ಹೇಳಿಕೆ ಸಮರ್ಥಿಸಿಕೊಳ್ಳುತ್ತಿರುವ ಸರ್ಕಾರದ ವಿರುದ್ಧ ಇಂದು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಯಲಿದೆ. ಳ

    D K Shivakumar (@dkshivakumar_official) 18 Feb 2022

    ಕಲಾಪಗಳು ಆರಂಭವಾಗುವ ಮುನ್ನ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು: ಡಿಕೆಶಿ ಆಗ್ರಹ

    ಕಲಾಪಗಳು ಆರಂಭವಾಗುವ ಮುನ್ನ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು: ಡಿಕೆಶಿ ಆಗ್ರಹ

    ಯುವತಿಯೊಬ್ಬಳ ಜತೆ ರೆಸ್ಟೋರೆಂಟ್​ನಲ್ಲಿ ಕಾಣಿಸಿಕೊಂಡ ನಟ ಧನುಷ್: ಯಾರು ಆ ಯುವತಿ?

    ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರ ಹಾಕಿ, ಇಲ್ಲವೇ ಅನಿದಿರ್ಷ್ಟಾವಧಿಗೆ ಮುಂದೂಡಿ: ಎಚ್​ಡಿಕೆ

    ನಟ ಧನುಷ್​ ಜತೆ​ ಡಿವೋರ್ಸ್: ಕೊನೆಗೂ ಮೌನ ಮುರಿದ ಐಶ್ವರ್ಯಾ ರಜಿನಿಕಾಂತ್​ ಹೇಳಿದ್ದು ಹೀಗೆ….

    ಕಾಂಗ್ರೆಸ್‌ ಅಹೋರಾತ್ರಿ ಧರಣಿ: ವಿಧಾನಸೌಧ ಆವರಣದಲ್ಲೇ ವಾಕಿಂಗ್‌, ದಿನ ಪತ್ರಿಕೆ ಓದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts