More

    ಕರ್ನಾಟಕದಲ್ಲಿ 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್​ ವಾಹನಗಳ ನೋಂದಣಿ: ಸಚಿವ ಮುರುಗೇಶ್ ನಿರಾಣಿ

    ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ ಮಾಡಿದ್ದಾರೆ.

    ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

    ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ’ ಎಂದು ಹೇಳಿದ್ದಾರೆ.

    ಕರ್ನಾಟಕದಲ್ಲಿ 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್​ ವಾಹನಗಳ ನೋಂದಣಿ: ಸಚಿವ ಮುರುಗೇಶ್ ನಿರಾಣಿ

    ಅರೆಬೆತ್ತಲೆ ದೃಶ್ಯಗಳ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ರಾಖಿ ಸಾವಂತ್​ ಇನ್ಮುಂದೆ ಈ ರೀತಿಯ ಬಟ್ಟೆ ಧರಿಸಲ್ಲವಂತೆ!

    ಅಭಿಷೇಕ್​ಗೆ ಆಫರ್​ ಬಂದಿರೋದು ನಿಜ… ಆದ್ರೆ ನಾನು ಅವನಿಗೆ ಸ್ಟೂಲ್ ಹಾಕಿಕೊಡಲ್ಲ: ಸುಮಲತಾ ಅಂಬರೀಷ್​

    ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ​! ಮಂಗ್ಳೂರು ಕಮೀಷನರ್​ರ ಸಾಹಸಕ್ಕೆ ಮನಸೋತ ಜನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts