ನವದೆಹಲಿ: ನಿನ್ನೆ (ಡಿಸೆಂಬರ್ 8) ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನಕ್ಕೂ ಮುನ್ನ ಹೆಲಿಕಾಪ್ಟರ್ ಪ್ರಯಾಣದ ಅಂತಿಮ ದೃಶ್ಯ ಮಾಧ್ಯಮಗಳಿಗೆ ಲಭ್ಯವಾಗಿದೆ.
ಕನೂರಿಗೆ ಆಗಮಿಸುವ ಕೆಲವೇ ಹೊತ್ತಲ್ಲೇ ಆಗಸದಲ್ಲೇ ಮಂಜಿನ ನಡುವೆ ಮರೆಯಾಗುವ ಹೆಲಿಕಾಪ್ಟರ್ನ ದೃಶ್ಯವನ್ನು ಅಲ್ಲಿನ ಸ್ಥಳೀಯರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದೆ.
ನಿನ್ನೆ ವೆಲ್ಲಿಂಗ್ಟನ್‌ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್ಗೆಂದು ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಬುಧವಾರ ರಷ್ಯಾ ನಿರ್ಮಿತ ಸೇನಾ ಹೆಲಿಕಾಪ್ಟರ್ Mi-17V5 ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಹೆಲಿಕಾಪ್ಟರ್ ಪತನಗೊಂಡು ಬಿಪಿನ್ ರಾವತ್ ದಂಪತಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಸಿಡಿಎಸ್ ಬಿಪಿನ್ ರಾವತ್ ನಿಧನಕ್ಕೇ ಇಡೀ ದೇಶವೇ ಕಂಬನಿ ಮಿಡಿದಿದೆ. (ಏಜೆನ್ಸೀಸ್)
ಹೆಲಿಕಾಪ್ಟರ್ ಪತನದ ವೈರಲ್ ವಿಡಿಯೋಗೂ ಸೇನಾ ಮುಖ್ಯಸ್ಥರಿದ್ದ ಕಾಪ್ಟರ್ ಪತನಕ್ಕೂ ಸಂಬಂಧವಿಲ್ಲ: ನಿಜಾಂಶ ಇಲ್ಲಿದೆ!
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೂ ಮುನ್ನ ನಿವೃತ್ತ ಸೇನಾಧಿಕಾರಿ ಮಾಡಿದ ಟ್ವೀಟ್ಗೆ ಭಾರೀ ಆಕ್ರೋಶ