

ಬೆಂಗಳೂರು: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಸೆ.29) ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.
ನಾಳೆ ಕೋಲಾರ ಭೇಟಿ
ನಿರ್ಮಲಾ ಸೀತಾರಾಮನ್ ನಾಳೆ ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ಅಮೃತ್ ಸರೋವರ ಯೋಜನೆ ಅಡಿ ಅಭಿವೃದ್ಧಿ ಪಡಿಸಿದ ಕೆರೆಗಳ ವೀಕ್ಷಣೆ ಮಾಡಲಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಚಿಕ್ಕ ಅಕಂಡಹಳ್ಳಿ, ಕೆಜಿಎಫ್ ತಾಲ್ಲೂಕಿನ ಪೆದ್ದಪಲ್ಲಿ, ಕೋಲಾರ ತಾಲ್ಲೂಕಿನ ಶೆಟ್ಟಿ ಕೊತ್ತನೂರು ಗ್ರಾಮದ ಕೆರೆಗಳ ವೀಕ್ಷಣೆ ಮಾಡಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ವಿಶೇಷ ಅನುದಾನದಲ್ಲಿ ಕೆರೆಗಳ ಅಭಿವೃದ್ದಿಯಾಗಿದೆ.