ನವದೆಹಲಿ: ಕರೊನಾ ಸಂಕಷ್ಟದ ನಡುವೆಯೂ ಮಂಡನೆಯಾಗಲಿರುವ 2022ನೇ ಸಾಲಿನ ಬಜೆಟ್ ಮೇಲೆ ಜನರ ನಿರೀಕ್ಷೆ ಹೆಚ್ಚಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ಮಂಡನೆ ತುಂಬಾ ವಿಶಿಷ್ಟವಾಗಿದ್ದು, ಕಳೆದ ಬಾರಿಯಂತೆ “ಬಹಿ ಖಾತಾ” ಸಂಪ್ರದಾಯವನ್ನು ಬದಿಗಿಟ್ಟು ಟ್ಯಾಬ್ ಮೂಲಕ ಆಯವ್ಯಯ ಮಂಡನೆ ಮಾಡಲಿದ್ದಾರೆ.
ಇಂದೆಲ್ಲ ಬಜೆಟ್ ಪ್ರತಿಗಳಿದ್ದ ಸೂಟ್ಕೇಸ್ ಹಿಡಿದುಕೊಂಡು ಸಂಸತ್ತಿಗೆ ಆಗಮಿಸಲಾಗುತ್ತಿತ್ತು. ಸೂಟ್ಕೇಸ್ ವಿದೇಶಿ ಸಂಸ್ಕೃತಿ ಆಗಿದ್ದರಿಂದ ಅದಕ್ಕೆ ಗುಡ್ಬೈ ಹೇಳಿದ್ದ ನಿರ್ಮಲಾ ಸೀತಾರಾಮನ್ ಸಾಂಪ್ರದಾಯಿಕ “ಬಹಿ ಖಾತಾ” ಹಿಡಿದು ಸಂಸತ್ತಿಗೆ ಆಗಮಿಸುವ ಮೂಲಕ ಹೊಸ ಪದ್ಧತಿಗೆ ನಾಂದಿ ಹಾಡಿದ್ದರು.
ಆದರೆ, ಕಳೆದ ಬಹಿ ಖಾತಾ ಪದ್ಧತಿಗೆ ಆಧುನಿಕ ಸ್ಪರ್ಶ ನೀಡಿದ್ದ ನಿರ್ಮಲಾ ಸೀತಾರಾಮನ್ ಬಜೆಟ್ ಅನ್ನು ಟ್ಯಾಬ್ ಮೂಲಕ ಮಂಡನೆ ಮಾಡಿದ್ದರು. ಈ ಮೂಲಕ ಬಜೆಟ್ಗೆ ಡಿಜಿಟಲ್ ಸ್ಪರ್ಶ ನೀಡಿದ್ದರು. ಅಲ್ಲದೆ, ಮೊದಲ ಬಾರಿಗೆ ಕಾಗದರಹಿತ ಬಜೆಟ್ ಮಂಡನೆ ಮಾಡಿದ ಹೆಸರಿಗೆ ಪಾತ್ರವಾಗಿದ್ದರು. ಈ ಬಾರಿಯು ಅದನ್ನೆ ಮುಂದುವರಿಸಿರುವ ನಿರ್ಮಲಾ ಸೀತಾರಾಮನ್ ಟ್ಯಾಬ್ ಮೂಲಕ ಬಜೆಟ್ ಮಂಡನೆ ಮಾಡಲಿದ್ದಾರೆ. (ಏಜೆನ್ಸೀಸ್)
ಚುನಾವಣಾ ಗಿಫ್ಟ್ ಬಜೆಟ್: ಕರೊನೋತ್ತರ ಬದುಕಿಗೆ ಉತ್ತೇಜನ; ಆರ್ಥಿಕತೆಗೂ ಟಾನಿಕ್
ಬಜೆಟ್ ಅಧಿವೇಶನಲ್ಲಿ ಮುಕ್ತ ಮನಸ್ಸಿನಿಂದ ಎಲ್ಲವನ್ನೂ ಚರ್ಚಿಸಿ, ಸುಗಮ ಕಲಾಪಕ್ಕೆ ಸಹಕರಿಸಿ: ಪ್ರಧಾನಿ ನರೇಂದ್ರ ಮೋದಿ