ಮಾಡೆಲ್​ಗಳಿಬ್ಬರ ದುರ್ಮರಣ: ನಿಗೂಢ ಸಾವಿಗೆ ಕೊನೆಗೂ ಕಾರಣ ಪತ್ತೆಹಚ್ಚಿದ ಪೊಲೀಸರು!

ಕೊಚ್ಚಿ: ಕೇರಳದ ಮಾಡೆಲ್​ಗಳಿಬ್ಬರ ಜೀವ ಕಸಿದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಿದ್ದಾರೆ. ಈ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಮಾಡೆಲ್​ಗಳು ಪಾಲ್ಗೊಂಡಿದ್ದ ಡಿಜಿ ಪಾರ್ಟಿ ನಡೆದ ಹೋಟೆಲ್​ ಮಾಲೀಕ ಹಾಗೂ ಅಪಘಾತಕ್ಕೀಡಾದ ಕಾರನ್ನು ಚೇಸ್​ ಮಾಡಿದ್ದ ಆಡಿ ಕಾರು ಪ್ರಕರಣವನ್ನು ನಿಗೂಢತೆಗೆ ದೂಡಿತ್ತು. ಇದೀಗ ಪ್ರಕರಣಕ್ಕೆ ಅಂತ್ಯ ಆಡಿರುವ ಪೊಲೀಸರು ಇದು ಕೊಲೆಯಲ್ಲ, ಮದ್ಯದ ಅಮಲಿನಲ್ಲಿ ನಡೆದ ದುರ್ಘಟನೆ ಎಂದು ನಿಗೂಢತೆಗೆ ತೆರೆ ಎಳೆದಿದ್ದಾರೆ. ನವೆಂಬರ್​ 1ರಂದು … Continue reading ಮಾಡೆಲ್​ಗಳಿಬ್ಬರ ದುರ್ಮರಣ: ನಿಗೂಢ ಸಾವಿಗೆ ಕೊನೆಗೂ ಕಾರಣ ಪತ್ತೆಹಚ್ಚಿದ ಪೊಲೀಸರು!