More

    ನೇಮಕವಾದ ಬೆನ್ನಲ್ಲೇ ಜಮ್ಮು ಕಾಶ್ಮೀರ ಕಾಂಗ್ರೆಸ್​ ಪ್ರಚಾರ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ಗುಲಾಂ ನಬಿ ರಾಜೀನಾಮೆ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್​ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾದ ಕೆಲವೇ ಕ್ಷಣಗಳಲ್ಲಿ ಆ ಸ್ಥಾನಕ್ಕೆ ಕಾಂಗ್ರೆಸ್​ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಅವರು ರಾಜೀನಾಮೆ ನೀಡಿ ಹೊರಬಂದಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

    ಆರೋಗ್ಯದ ಕಾರಣ ನೀಡಿ, ಹೊಸ ಜವಬ್ದಾರಿಯನ್ನು ತೆಗೆದುಕೊಳ್ಳಲು ಗುಲಾಂ ನಬಿ ಆಜಾದ್​ ಅವರು ನಿರಾಕರಿಸಿದ್ದಾರೆಂದು ತಿಳಿದುಬಂದಿದೆ. ಕಾಂಗ್ರೆಸ್​ ಪ್ರಚಾರ ಸಮಿತಿಯನ್ನು ಮಂಗಳವಾರ ಹೊಸದಾಗಿ ರಚಿಸಲಾಗಿದೆ. ಈ ಸಮಿಯು ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರ ಸೇರಿದಂತೆ 11 ನಾಯಕರನ್ನು ಒಳಗೊಂಡಿದೆ. ತಾರಿಕ್ ಹಮೀದ್ ಕರ್ರಾ ಅವರನ್ನು ಪ್ರಚಾರ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಮತ್ತು ಜಿ.ಎಂ.ಸರೂರಿ ಅವರು ಸಂಚಾಲಕರಾಗಿದ್ದಾರೆ.

    ಗುಲಾಂ ನಬಿ ರಾಜೀನಾಮೆ ನೀಡಿದ ಸಂದರ್ಭದಲ್ಲೇ ಕಾಂಗ್ರೆಸ್ ಮಂಗಳವಾರ ವಿಕರ್ ರಸೂಲ್ ವಾನಿ ಅವರನ್ನು ಕಾಂಗ್ರೆಸ್​ ಪಕ್ಷದ ಜಮ್ಮು ಮತ್ತು ಕಾಶ್ಮೀರದ ಮುಖ್ಯಸ್ಥರನ್ನಾಗಿ ನೇಮಿಸಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗುಲಾಮ್ ಅಹ್ಮದ್ ಮಿರ್ ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ.

    ಸೋನಿಯಾ ಗಾಂಧಿ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಅಲ್ಲದೆ, ಪ್ರಚಾರ ಸಮಿತಿ, ರಾಜಕೀಯ ವ್ಯವಹಾರಗಳ ಸಮಿತಿ, ಸಮನ್ವಯ ಸಮಿತಿ, ಪ್ರಣಾಳಿಕೆ ಸಮಿತಿ, ಪ್ರಚಾರ ಮತ್ತು ಪ್ರಕಟಣೆ ಸಮಿತಿ, ಶಿಸ್ತು ಸಮಿತಿ ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಹಾಗೂ ಪ್ರದೇಶ ಚುನಾವಣಾ ಸಮಿತಿಯನ್ನು ತಕ್ಷಣದ ಪರಿಣಾಮದೊಂದಿಗೆ ರಚಿಸಿದ್ದಾರೆ.

    ವಾನಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದರೆ, ರಾಮನ್ ಭಲ್ಲಾ ಅವರನ್ನು ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. (ಏಜೆನ್ಸೀಸ್​)

    ಥಾಯ್ಲೆಂಡ್​ ವಿಮಾನದಲ್ಲಾದ ಅತ್ಯಂತ ಕೆಟ್ಟ ಅನುಭವವನ್ನು ಬಹಿರಂಗಪಡಿಸಿದ ಮಲಯಾಳಿ ಬ್ಯೂಟಿ ನಜ್ರಿಯಾ!

    ಸಾಮಾಜಿಕ ಜಾಲತಾಣ ಕೂ ಮೂಲಕ ಕನಸು ಈಡೇರಿಸಿಕೊಂಡ ಕಾಶ್ಮೀರಿ ಅಥ್ಲೆಟಿ ಡ್ಯಾನಿಶ್

    ಸೈಬರ್ ಕಳ್ಳರ ಪಾಲಾದ ಹಣ ಗ್ರಾಹಕರಿಗೆ ಮರೀಚಿಕೆ!: ಶೇ.75 ಜನರಿಗೆ ಕಳೆದುಕೊಂಡ ದುಡ್ಡು ಮರಳಿಲ್ಲ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts